ಕೇಂದ್ರಕ್ಕೆ ಸೆಡ್ಡು: ವಿವಾದಿತ ಕೃಷಿ ಮಸೂದೆ ತಡೆಗೆ ಮಸೂದೆ ಜಾರಿಗೆ ಮುಂದಾದ ರಾಜಸ್ತಾನ ಸರ್ಕಾರ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಮಸೂದೆಯನ್ನು ತಡೆಯಲು ರಾಜಸ್ಥಾನ ಸರ್ಕಾರ ಹೊಸ ಮಸೂದೆಯನ್ನು ಜಾರಿಗೆ ತರಲು ನಿರ್ಧರಿಸಿದೆ.
ಅಶೋಕ್ ಗೆಹ್ಲೋಟ್
ಅಶೋಕ್ ಗೆಹ್ಲೋಟ್

ಜೈಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಮಸೂದೆಯನ್ನು ತಡೆಯಲು ರಾಜಸ್ಥಾನ ಸರ್ಕಾರ ಹೊಸ ಮಸೂದೆಯನ್ನು ಜಾರಿಗೆ ತರಲು ನಿರ್ಧರಿಸಿದೆ.

ಹೌದು ಈ ಬಗ್ಗೆ ಸ್ವತಃ ಸಿಎಂ ಅಶೋಕ್ ಗೆಹ್ಲೂಟ್ ಅವರು ಟ್ವೀಟ್ ಮಾಡಿದ್ದು, ಕೇಂದ್ರ ಸರ್ಕಾರದ ವಿವಾದಿತ ಕೃಷಿ ಮಸೂದೆ ತಡೆಗೆ ತಾವು ಕೂಡ ಮಸೂದೆ ತರುವುದಾಗಿ ಹೇಳಿದ್ದಾರೆ. ಇತ್ತೀಚೆಗಷ್ಟೇ ಇದೇ ವಿಚಾರವಾಗಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದ ಪಂಜಾಬ್ ಸರ್ಕಾರ ಕೃಷಿ ಮಸೂದೆ ತಡೆಗೆ  ಅಧಿವೇಶನದಲ್ಲಿ ನಾಲ್ಕು ಮಸೂದೆಗಳನ್ನು ಮತ್ತು ನಿರ್ಣಯಗಳನ್ನು ಅಂಗೀಕರಿಸಿತ್ತು. ಈ ಬೆಳವಣಿಗೆಯ ನಡುವೆಯೇ ರಾಜಸ್ಥಾನ ಸರ್ಕಾರ ಕೂಡ ಕೃಷಿ ಮಸೂದೆ ಬಿಲ್ ಜಾರಿಗೆ ತರುವುದಾಗಿ ಘೋಷಣೆ ಮಾಡಿದೆ.

ಕೃಷಿ ಕಾನೂನು ತಡೆಗೆ ಮಸೂದೆ ರೂಪಿಸಿ ಎಂದಿದ್ದ ಸೋನಿಯಾ
ಈ ಹಿಂದೆ ಕೇಂದ್ರ ಸರ್ಕಾರ ರೂಪಿಸಿರುವ ಮೂರು ಕೃಷಿ ಕಾನೂನುಗಳ ವ್ಯಾಪ್ತಿಯಿಂದ ರಾಜ್ಯಗಳನ್ನು ಹೊರಗಿಡಲು ಸಾಧ್ಯವಾಗುವಂತೆ ರಾಜ್ಯಮಟ್ಟದಲ್ಲಿ ಕಾನೂನು ರಚಿಸುವ ಸಾಧ್ಯತೆಗಳ ಬಗ್ಗೆ ಚಿಂತನೆ ನಡೆಸುವಂತೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕಾಂಗ್ರೆಸ್‌ ಆಡಳಿತವಿರುವ ರಾಜ್ಯಗಳ  ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com