ಬಲಿಯಾ ಗುಂಡಿನ ದಾಳಿ ಪ್ರಕರಣ: ಬಿಜೆಪಿ ಮುಖಂಡ ಧೀರೇಂದ್ರ ಸಿಂಗ್ ಯುಪಿ ಪೊಲೀಸ್ ವಶಕ್ಕೆ

ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯ ದುರ್ಜನ್‌ಪುರ ಗ್ರಾಮದಲ್ಲಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಬಿಜೆಪಿ ಮುಖಂಡ ಧೀರೇಂದ್ರ ಪ್ರತಾಪ್ ಸಿಂಗ್ ಅವರನ್ನು ಬಲಿಯಾ ಕೊರ್ಟ್ ಗುರುವಾರ ಪೊಲೀಸ್ ವಶಕ್ಕೆ ನೀಡಿದೆ.

Published: 22nd October 2020 07:53 PM  |   Last Updated: 22nd October 2020 07:53 PM   |  A+A-


Mandya: Police constable brutally assaulted after ge tried to clear domestic quarrel

ಸಾಂದರ್ಭಿಕ ಚಿತ್ರ

Posted By : Lingaraj Badiger
Source : UNI

ಬಲಿಯಾ: ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯ ದುರ್ಜನ್‌ಪುರ ಗ್ರಾಮದಲ್ಲಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಬಿಜೆಪಿ ಮುಖಂಡ ಧೀರೇಂದ್ರ ಪ್ರತಾಪ್ ಸಿಂಗ್ ಅವರನ್ನು ಬಲಿಯಾ ಕೊರ್ಟ್ ಗುರುವಾರ ಪೊಲೀಸ್ ವಶಕ್ಕೆ ನೀಡಿದೆ.

ಗುಂಡಿನ ದಾಳಿ ಪ್ರಕರಣ ಸಂಬಂಧ ಕಳೆದ ಭಾನುವಾರ ಧೀರೇಂದ್ರ ಸಿಂಗ್ ಅವರನ್ನು ಪೊಲೀಸರು ಬಂಧಿಸಿದ್ದರು. ಅಂದಿನಿಂದ ನ್ಯಾಯಾಂಗ ಬಂಧನದಲ್ಲಿದ್ದ ಧೀರೇಂದ್ರ ಸಿಂಗ್ ಅವರನ್ನು ಬಲಿಯಾ ನ್ಯಾಯಾಲಯ ಎರಡು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಇಂದು ಆದೇಶಿಸಿದೆ.

ಕೊಲೆಗೆ ಬಳಸಿದ ಶಸ್ತ್ರಾಸ್ತ್ರ, ದೇಶ ನಿರ್ಮಿತ ಪಿಸ್ತೂಲ್ ಅನ್ನು ಆರೋಪಿಯಿಂದ ವಶಪಡಿಸಿಕೊಳ್ಳಲು ಮತ್ತು ಹೆಚ್ಚಿನ ವಿಚಾರಣೆಗಾಗಿ ಧೀರೇಂದ್ರ ಸಿಂಗ್ ಅವರನ್ನು ಕೋರ್ಟ್ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದೆ.

ದುರ್ಜಾನ್ ಪುರ್ ಗ್ರಾಮದಲ್ಲಿ ಸರ್ಕಾರಿ ಕೋಟಾದಡಿ ಅಂಗಡಿಯನ್ನು ಹಂಚಿಕೆ ಮಾಡಿದ್ದ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಘರ್ಷಣೆ ವೇಳೆ ಗುಂಡಿನ ದಾಳಿ ನಡೆಸಲಾಗಿತ್ತು. ಈ ವೇಳೆ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp