ಮುಂಬೈ ಶಾಪಿಂಗ್ ಮಾಲ್'ನಲ್ಲಿ ಅಗ್ನಿ ಅವಘಡ: 20 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ, 3,500ಕ್ಕೂ ಹೆಚ್ಚು ಜನರ ಸ್ಥಳಾಂತರ

ದಕ್ಷಿಣ ಮುಂಬೈನಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ದೌಡಾಯಿಸಿರುವ 20 ಅಗ್ನಿಶಾಮಕ ದಳದ ವಾಹನಗಳು ಕಾರ್ಯಾಚರಣೆ ಆರಂಭಿಸಿವೆ. 

Published: 23rd October 2020 09:04 AM  |   Last Updated: 23rd October 2020 12:36 PM   |  A+A-


Firefighting operations underway at the mall in Mumbai's Nagpada

ಅಗ್ನಿಅವಘಡ

Posted By : Manjula VN
Source : Online Desk

ಮುಂಬೈ: ದಕ್ಷಿಣ ಮುಂಬೈನಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ದೌಡಾಯಿಸಿರುವ 20 ಅಗ್ನಿಶಾಮಕ ದಳದ ವಾಹನಗಳು ಕಾರ್ಯಾಚರಣೆ ಆರಂಭಿಸಿವೆ. 

ಕಳೆದ ರಾತ್ರಿ ಈ ಅಗ್ನಿ ಅವಘಡ ಸಂಭವಿಸಿದ್ದು, ಈ ವರೆಗೂ 3,500 ಜನರನ್ನು ಸುರಕ್ಷತವಾಗಿ ರಕ್ಷಣೆ ಮಾಡಿದ್ದಾರೆ. ಬೆಂಕಿಯ ಕೆನ್ನಾಲಿಗೆ 4 ಮಹಡಿಯ ಕಟ್ಟಡದ ಹಲವು ಕಡೆ ಹರಡಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. 

ಈ ನಡುವೆ ಕಾರ್ಯಾಚರಣೆ ಮೇವಲೆ ಓರ್ವ ಸಿಬ್ಬಂದಿ ಗಾಯಗೊಂಡಿದ್ದು, ಗಾಯಗೊಂಡ ಸಿಬ್ಬಂದಿಯನ್ನು ಮುಂಬೈನ ಜೆಜೆ ಆಸ್ಪತ್ರೆಗೆ ದಾಖಲು ಮಾಡಿದ್ದಾರೆಂದು ತಿಳಿದುಬಂದಿದೆ. ಅಗ್ನಿ ರೌದ್ರನರ್ತನ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಘಟನೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. 

Stay up to date on all the latest ರಾಷ್ಟ್ರೀಯ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp