ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಎರಡು ತಿಂಗಳ ನಂತರ ಇದೇ ಮೊದಲ ಬಾರಿಗೆ ದೇಶದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ

ಮಹತ್ವದ ಬೆಳವಣಿಯಲ್ಲಿಯಲ್ಲಿ ದೇಶದ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡು ತಿಂಗಳ ನಂತರ ಇದೇ ಮೊದಲ ಬಾರಿಗೆ 7 ಲಕ್ಷಕ್ಕಿಂತಲೂ ಕಡಿಮೆಯಾಗಿದೆ. ಈ ಮಧ್ಯೆ ಒಟ್ಟಾರೇ ಚೇತರಿಕೆ ಸಂಖ್ಯೆ 69 ಲಕ್ಷ ದಾಟಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ನವದೆಹಲಿ: ಮಹತ್ವದ ಬೆಳವಣಿಯಲ್ಲಿಯಲ್ಲಿ ದೇಶದ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡು ತಿಂಗಳ ನಂತರ ಇದೇ ಮೊದಲ ಬಾರಿಗೆ 7 ಲಕ್ಷಕ್ಕಿಂತಲೂ ಕಡಿಮೆಯಾಗಿದೆ. ಈ ಮಧ್ಯೆ ಒಟ್ಟಾರೇ ಚೇತರಿಕೆ ಸಂಖ್ಯೆ 69 ಲಕ್ಷ ದಾಟಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆಗಿಂತಲೂ ಗುಣಮುಖರಾಗುವವರ ಪ್ರಮಾಣ ಸುಮಾರು 10 ಪಟ್ಟು ಹೆಚ್ಚಾಗಿದೆ. 63  ದಿನಗಳ ನಂತರ ಇದೇ ಮೊದಲ ಬಾರಿಗೆ ಇಂತಹ ಗಮನಾರ್ಹ ಬೆಳವಣಿಗೆಯಾಗಿರುವುದಾಗಿ ಸಚಿವಾಲಯ ಹೇಳಿದೆ.

ಕಳೆದ ಆಗಸ್ಟ್ 22 ರಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7 ಲಕ್ಷಕ್ಕಿಂತ ಕಡಿಮೆಯಿತ್ತು. ದಿನದಿಂದ ದಿನಕ್ಕೆ ಕೋವಿಡ್-19 ರೋಗಿಗಳ ಚೇತರಿಕೆ ಪ್ರಮಾಣ ಹೆಚ್ಚಾಗುತ್ತಿರುವಂತೆಯೇ ಮರಣ ಪ್ರಮಾಣ ಕಡಿಮೆಯಾಗುತ್ತಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ ಮುಂದುವರೆದಿದೆ ಎಂದು ತಿಳಿಸಿದೆ.

ಒಟ್ಟಾರೇ ಗುಣಮುಖರಾದವರ ಸಂಖ್ಯೆ 69, 48,497 ದಾಟಿದ್ದು, ಸಕ್ರಿಯ ಪ್ರಕರಣಗಳು ಸಂಖ್ಯೆ 62, 52, 988 ಆಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 73,979 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 54, 366 ಹೊಸ ಪ್ರಕರಣಗಳು ಕಂಡುಬಂದಿದ್ದು, ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.89.53ಕ್ಕೆ ತಲುಪಿದೆ.

Related Stories

No stories found.

Advertisement

X
Kannada Prabha
www.kannadaprabha.com