ಭೀಮಾ ಕೊರೆಗಾಂವ್ ಪ್ರಕರಣ: ಸ್ಟ್ಯಾನ್ ಸ್ವಾಮಿ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತ

ಭೀಮಾ ಕೊರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾನವ ಹಕ್ಕುಗಳ ಹೋರಾಟಗಾರ ಸ್ಟಾನ್ ಸ್ವಾಮಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ.

Published: 23rd October 2020 05:04 PM  |   Last Updated: 23rd October 2020 05:04 PM   |  A+A-


Father Stan Swamy

ಸ್ಟ್ಯಾನ್‌ ಸ್ವಾಮಿ

Posted By : Srinivasamurthy VN
Source : PTI

ಮುಂಬೈ: ಭೀಮಾ ಕೊರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾನವ ಹಕ್ಕುಗಳ ಹೋರಾಟಗಾರ ಸ್ಟಾನ್ ಸ್ವಾಮಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ.

ಸ್ವಾಮಿ ಅವರನ್ನು ಜಾರ್ಖಂಡ್‌ನ ರಾಂಚಿಯಿಂದ ಅಕ್ಟೋಬರ್ 8ರಂದು ಬಂಧಿಸಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಮರುದಿನ ಅವರನ್ನು ಮುಂಬೈಗೆ ಕರೆದೊಯ್ದಿತ್ತು. ಇಳಿ ವಯಸ್ಸು ಹಾಗೂ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ವೈದ್ಯಕೀಯ ಆಧಾರದ ಮೇಲೆ ಮಧ್ಯಂತರ  ಜಾಮೀನು ಕೋರಿ ಸ್ವಾಮಿ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. 

ಸ್ವಾಮಿ ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿರುವ ಕಾರಣ ಅವರಿಗೆ ಸಹಿ ಹಾಕಲು ಕೂಡ ಸಾಧ್ಯವಾಗಿಲ್ಲ. ಹೀಗಾಗಿ ಅವರ ಹೆಬ್ಬೆರಳು ಗುರುತು ಪಡೆಯಲಾಗಿದೆ ಎಂದು ಸ್ವಾಮಿ ಪರ ವಕೀಲರಾದ ಶರೀಫ್ ಶೇಖ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. 

ಪ್ರಸ್ತುತ ಸ್ವಾಮಿ ಅವರನ್ನು ಮುಂಬೈನ ತಲೋಜ ಜೈಲಿನಲ್ಲಿರುವ ಕ್ಯಾರೆಂಟೈನ್ ವಾರ್ಡ್‌ನಲ್ಲಿ ಇರಿಸಲಾಗಿದೆ.  ಭೀಮಾ ಕೊರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾದವರ ಪೈಕಿ ಸ್ವಾಮಿ 16ನೇ ವ್ಯಕ್ತಿಯಾಗಿದ್ದಾರೆ. ಜಾರ್ಖಂಡ್ ನ ರಾಂಚಿಯ ತಮ್ಮ ನಿವಾಸದಲ್ಲಿದ್ದ ಸ್ವಾಮಿ ಅವರನ್ನು ಅಕ್ಟೋಬರ್  9ರಂದು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. 

ನಿಷೇಧಿತ ಸಿಪಿಐ (ಮಾವೊವಾದಿ) ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆಂಬ ಆರೋಪದಡಿ ಅವರನ್ನು ಬಂಧಿಸಲಾಗಿತ್ತು. ಸ್ಟ್ಯಾನ್‌ ಸ್ವಾಮಿ ಮಾತ್ರವಲ್ಲದೆ ಈ ಪ್ರಕರಣದಲ್ಲಿ ಹದಿನಾರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಐಪಿಸಿ ಸೆಕ್ಷನ್ ಮತ್ತು ಭಯೋತ್ಪಾದಕಾ ನಿಗ್ರಹ ಕಾಯ್ದೆ-ಯುಪಿಎಪಿ ಅಡಿಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Stay up to date on all the latest ರಾಷ್ಟ್ರೀಯ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp