ಅಕ್ಟೋಬರ್ 24 ರಂದು ಪ್ರಧಾನಿಯಿಂದ ಗುಜರಾತ್‌ನ ಮೂರು ಪ್ರಮುಖ ಯೋಜನೆಗಳ ಉದ್ಘಾಟನೆ

ಗುಜರಾತ್‌ನ ರೈತರಿಗಾಗಿ ‘ಕಿಸಾನ್ ಸೂರ್ಯೋದಯ ಯೋಜನೆ’ ಸೇರಿದಂತೆ ಮೂರು ಪ್ರಮುಖ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅ 24 ರಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ಗುರುವಾರ ತಿಳಿಸಿದೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ಗುಜರಾತ್‌ನ ರೈತರಿಗಾಗಿ ‘ಕಿಸಾನ್ ಸೂರ್ಯೋದಯ ಯೋಜನೆ’ ಸೇರಿದಂತೆ ಮೂರು ಪ್ರಮುಖ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅ 24 ರಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ಗುರುವಾರ ತಿಳಿಸಿದೆ.

ಕಿಸಾನ್ ಸೂರ್ಯೋದಯ ಯೋಜನೆ’ ಅಲ್ಲದೆ,ಯು ಎನ್ ಮೆಹ್ತಾ ಹೃದ್ರೋಗ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ಮಕ್ಕಳ ಹೃದಯ ಚಿಕಿತ್ಸಾ ಆಸ್ಪತ್ರೆ ಹಾಗೂ ಅಹಮದಾಬಾದ್‍ ಸರ್ಕಾರಿ ಆಸ್ಪತ್ರೆಯ ಸರ್ಕಾರಿ ಆಸ್ಪತ್ರೆಯಲ್ಲಿ ಟೆಲಿ-ಹೃದ್ರೋಗ ಮೊಬೈಲ್ ಅಪ್ಲಿಕೇಶನ್ ಅನ್ನು ಉದ್ಘಾಟಿಸಲಿದ್ದಾರೆ. ಅಲ್ಲದೆ,  ಪ್ರಧಾನಿಯವರು ಗಿರ್ನಾರ್‌ನಲ್ಲಿನ ರೋಪ್‌ವೇ ಸಹ ಉದ್ಘಾಟಿಸಲಿದ್ದಾರೆ.

ನೀರಾವರಿಗಾಗಿ ಹಗಲು ವೇಳೆ ವಿದ್ಯುತ್ ಸರಬರಾಜು ಮಾಡಲು ಮುಖ್ಯಮಂತ್ರಿ ವಿಜಯ್ ರೂಪಾನಿ ನೇತೃತ್ವದ ಗುಜರಾತ್ ಸರ್ಕಾರ ಇತ್ತೀಚೆಗೆ ‘ಕಿಸಾನ್ ಸೂರ್ಯೋದಯ ಯೋಜನೆ’ ಘೋಷಿಸಿತ್ತು. ಈ ಯೋಜನೆಯಡಿ ರೈತರ ಜಮೀನುಗಳಿಗೆ ಬೆಳಿಗ್ಗೆ 5 ರಿಂದ ರಾತ್ರಿ 9 ರವರೆಗೆ ವಿದ್ಯುತ್ ಸರಬರಾಜು  ಮಾಡಲಾಗುತ್ತದೆ. ಯೋಜನೆಯ ಪ್ರಸರಣ ಮೂಲಸೌಕರ್ಯಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ 3,523 ಕೋಟಿ ರೂ.ನಿಗದಿಪಡಿಸಿದೆ.

ಯು ಎನ್ ಮೆಹ್ತಾ ಸಂಸ್ಥೆ ಇದೀಗ ಹೃದಯಶಾಸ್ತ್ರದ ಭಾರತದ ಅತಿದೊಡ್ಡ ಆಸ್ಪತ್ರೆಯಾಗಲಿದೆ. ಜೊತೆಗೆ ವಿಶ್ವದರ್ಜೆಯ ವೈದ್ಯಕೀಯ ಮೂಲಸೌಕರ್ಯ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಹೊಂದಿರುವ ವಿಶ್ವದ ಆಯ್ದ ಕೆಲವೇ ಆಸ್ಪತ್ರೆಗಳಲ್ಲಿ ಒಂದಾಗಲಿದೆ. ಗಿರ್ನಾರ್‌ನಲ್ಲಿ ಪ್ರಧಾನ ಮಂತ್ರಿ ರೋಪ್‌ವೇ  ಉದ್ಘಾಟಿಸುವುದರೊಂದಿಗೆ ಕಾರಣ ಗುಜರಾತ್ ಮತ್ತೊಮ್ಮೆ ಜಾಗತಿಕ ಪ್ರವಾಸೋದ್ಯಮ ನಕ್ಷೆಯಲ್ಲಿ ಎದ್ದು ಕಾಣಲಿದೆ. ಆರಂಭದಲ್ಲಿ 25-30 ಕ್ಯಾಬಿನ್‌ಗಳು ಇರಲಿದ್ದು, ಪ್ರತಿ ಕ್ಯಾಬಿನ್‌ ನಲ್ಲಿ 8 ಜನರು ಸಾಗುವ ಸಾಮರ್ಥ್ಯವಿದೆ. ರೋಪ್‍ ವೇ ಉದ್ದ 2.3 ಕಿ.ಮೀ ಆಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com