6 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ತ್ವರಿತ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಿ- ಪಂಜಾಬ್ ಸಿಎಂ

ಪಂಜಾಬ್ ರಾಜ್ಯದ ಹೊಶಿಯಾರ್ ಪುರ್ ನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಘಟನೆ ಬಗ್ಗೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

Published: 23rd October 2020 09:58 AM  |   Last Updated: 23rd October 2020 12:37 PM   |  A+A-


Punjab CM Amarinder Singh

ಪಂಜಾಬ್ ಸಿಎಂ ಅಮರಿಂದರ್ ಸಿಂಗ್

Posted By : Sumana Upadhyaya
Source : ANI

ಹೊಶಿಯಾರ್ ಪುರ್(ಪಂಜಾಬ್): ಪಂಜಾಬ್ ರಾಜ್ಯದ ಹೊಶಿಯಾರ್ ಪುರ್ ನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಘಟನೆ ಬಗ್ಗೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

ಇದು ತೀವ್ರ ಆಘಾತಕಾರಿ ಘಟನೆಯಾಗಿದ್ದು, ಬೇಸರ ಹುಟ್ಟಿಸುತ್ತದೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರೂ ಕೂಡ ತ್ವರಿತವಾಗಿ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಿ ಬಾಲಕಿಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಡಿಜಿಪಿಯವರಿಗೆ ಆದೇಶ ನೀಡಿದ್ದೇನೆ.

ನ್ಯಾಯಾಲಯ ಕೂಡ ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಸಿಎಂ ಅಮರಿಂದರ್ ಸಿಂಗ್ ಒತ್ತಾಯಿಸಿದ್ದಾರೆ.

ಹೊಶಿಯಾರ್ ಪುರದ ಜಲಾಲ್ ಪುರದಲ್ಲಿ ವಲಸೆ ಕಾರ್ಮಿಕನ ಮಗಳನ್ನು ಕಿಡಿಗೇಡಿಗಳು ಹೊತ್ತೊಯ್ದು ಅತ್ಯಾಚಾರವೆಸಗಿ ಸಜೀವ ದಹನ ಮಾಡಿದ್ದಾರೆ ಎನ್ನಲಾಗಿದೆ.

Stay up to date on all the latest ರಾಷ್ಟ್ರೀಯ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp