ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಡಿಸೆಂಬರ್ 31 ಕಡೇ ದಿನ!

2019-20ನೇ ಸಾಲಿಗೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ನೀಡಲಾಗಿದ್ದ ಗಡುವನ್ನು ಡಿಸೆಂಬರ್ 31ರವರೆಗೂ ಕೇಂದ್ರ ಸರ್ಕಾರ ವಿಸ್ತರಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: 2019-20ನೇ ಸಾಲಿಗೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ನೀಡಲಾಗಿದ್ದ ಗಡುವನ್ನು ಡಿಸೆಂಬರ್ 31ರವರೆಗೂ ಕೇಂದ್ರ ಸರ್ಕಾರ ವಿಸ್ತರಿಸಿದೆ.

ಖಾತೆಗಳನ್ನು ಲೆಕ್ಕಪರಿಶೋಧಿಸಬೇಕಾದ ತೆರಿಗೆದಾರರಿಗೆ, ಆದಾಯ-ತೆರಿಗೆ ರಿಟರ್ನ್ ಫೈಲಿಂಗ್ ಗಡುವನ್ನು 2021 ಜನವರಿ 31 ರವರೆಗೆ ಎರಡು ತಿಂಗಳು ವಿಸ್ತರಣೆ ಮಾಡಲಾಗಿದೆ.

 2019-20ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಕಡೇ ದಿನವನ್ನು ಜುಲೈ 31ರಿಂದ ನವೆಂಬರ್ 30ರವರೆಗೂ ವಿಸ್ತರಿಸಿ ಕೇಂದ್ರ ಸರ್ಕಾರ ಮೇ ತಿಂಗಳಲ್ಲಿ ಪ್ರಕಟಿಸಿತ್ತು. 

ಕೋವಿಡ್- 19 ಸಾಂಕ್ರಾಮಿಕ ರೋಗದಿಂದಾಗಿ ತೆರಿಗೆದಾರರು ಎದುರಿಸುತ್ತಿರುವ ತೊಂದರೆಗಳನ್ನು  ಗಮನದಲ್ಲಿಟ್ಟುಕೊಂಡು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಆದಾಯ ತೆರಿಗೆ ಇಲಾಖೆಯ ಉನ್ನತ ನೀತಿ ನಿರೂಪಣಾ ಸಂಸ್ಥೆಯಾದ ಕೇಂದ್ರೀಯ ನೇರ ತೆರಿಗೆ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ತೆರಿಗೆದಾರರಿಗೆ ಹೆಚ್ಚಿನ ಸಮಯವನ್ನು ನೀಡುವ ಸಲುವಾಗಿ ಗಡುವನ್ನು ವಿಸ್ತರಿಸಲಾಗಿದೆ ಎಂದು ಸಿಬಿಡಿಟಿ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com