ಖ್ಯಾತ ಬೆಂಗಾಲಿ ನಟ ಸೌಮಿತ್ರ ಚಟರ್ಜಿ ಆರೋಗ್ಯ ಸ್ಥಿತಿ ಚಿಂತಾಜನಕ: ವೈದ್ಯರು
ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಬೆಂಗಾಲಿ ಚಿತ್ರರಂಗದ ಹಿರಿಯ ನಟ ಸೌಮಿತ್ರಾ ಚಟರ್ಜಿ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಭಾನುವಾರ ತಿಳಿಸಿದ್ದಾರೆ.
Published: 25th October 2020 04:29 PM | Last Updated: 25th October 2020 04:29 PM | A+A A-

ಸೌಮಿತ್ರ ಚಟರ್ಜಿ
ಕೋಲ್ಕತಾ: ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಬೆಂಗಾಲಿ ಚಿತ್ರರಂಗದ ಹಿರಿಯ ನಟ ಸೌಮಿತ್ರ ಚಟರ್ಜಿ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಭಾನುವಾರ ತಿಳಿಸಿದ್ದಾರೆ.
85 ವರ್ಷದ ನಟ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಮತ್ತು ಕಳೆದ 24 ಗಂಟೆಗಳಲ್ಲಿ ಅವರ ಪ್ಲೇಟ್‌ಲೆಟ್ ಕೌಂಟ್ ಮತ್ತಷ್ಟು ಕುಸಿದಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.
"ಅವರ ನರವೈಜ್ಞಾನಿಕ ಸ್ಥಿತಿ ಕ್ಷೀಣಿಸುತ್ತಿದೆ ಮತ್ತು ಅವರಿಗೆ ಬಹಳ ಕಡಿಮೆ ಪ್ರಜ್ಞೆ ಇದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ. ಅವರ ಸ್ಥಿತಿ ತುಂಬಾ ಗಂಭೀರವಾಗಿದೆ" ಎಂದು ಆಸ್ಪತ್ರೆಯ ಹಿರಿಯ ವೈದ್ಯರು ಪಿಟಿಐಗೆ ತಿಳಿಸಿದ್ದಾರೆ.
ಕ್ಯಾನ್ಸರ್ ನಿಂದ ಬಳಲುತ್ತಿರುವ ಸೌಮಿತ್ರ ಚಟರ್ಜಿ ಅವರಿಗೆ ಇತ್ತೀಚೆಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಹೀಗಾಗಿ, ಅವರ ಆರೋಗ್ಯದಲ್ಲಿ ಮತ್ತಷ್ಟು ಏರಿಳಿತ ಉಂಟಾಗಿತ್ತು, ಅವರ ಆರೋಗ್ಯದಲ್ಲಿ ಮತ್ತಷ್ಟು ವಿಷಮವಾಗಿದ್ದರಿಂದ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.