ಕೋವಿಡ್-19: ನಾಲ್ಕು ತಿಂಗಳ ಬಳಿಕ ತಮಿಳುನಾಡಿನಲ್ಲಿ 3 ಸಾವಿರಕ್ಕಿಂತ ಕೆಳಗಿಳಿದ ನಿತ್ಯ ಹೊಸ ಪ್ರಕರಣಗಳ ಸಂಖ್ಯೆ!

ಬರೊಬ್ಬರಿ ನಾಲ್ಕು ತಿಂಗಳ ಬಳಿಕ ನೆರೆಯ ತಮಿಳುನಾಡಿನಲ್ಲಿ ನಿತ್ಯ ಹೊಸ ಸೋಂಕು ಪ್ರಕರಣಗಳ ಸಂಖ್ಯೆ 3 ಸಾವಿರಕ್ಕಿಂತ ಕೆಳಗೆ ಇಳಿದೆ.

Published: 25th October 2020 07:54 AM  |   Last Updated: 25th October 2020 07:54 AM   |  A+A-


Tamil Nadu-Covid-19

ಸಂಗ್ರಹ ಚಿತ್ರ

Posted By : Srinivasamurthy VN
Source : The New Indian Express

ಚೆನ್ನೈ: ಬರೊಬ್ಬರಿ ನಾಲ್ಕು ತಿಂಗಳ ಬಳಿಕ ನೆರೆಯ ತಮಿಳುನಾಡಿನಲ್ಲಿ ನಿತ್ಯ ಹೊಸ ಸೋಂಕು ಪ್ರಕರಣಗಳ ಸಂಖ್ಯೆ 3 ಸಾವಿರಕ್ಕಿಂತ ಕೆಳಗೆ ಇಳಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ತಮಿಳುನಾಡಿನಲ್ಲಿ 2,886 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 7,06,136ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ 4,024 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಗುಣಮುಖರ ಸಂಖ್ಯೆ 6,63,456ಕ್ಕೆ ಏರಿಕೆಯಾಗಿದೆ. 

ಇನ್ನು ನಿನ್ನೆ ತಮಿಳುನಾಡಿನಲ್ಲಿ ಒಟ್ಟು 35 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಒಟ್ಟಾರೆ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 10,893ಕ್ಕೆ ಏರಿಕೆಯಾಗಿದೆ. ಪ್ರಸ್ತುತ ತಮಿಳುನಾಡಿನಲ್ಲಿ 31,787 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ ತಮಿಳುನಾಡಿನಲ್ಲಿ 80,237 ಕೋವಿಡ್ ಪರೀಕ್ಷೆ ನಡೆಸಲಾಗಿದೆ. 


Stay up to date on all the latest ರಾಷ್ಟ್ರೀಯ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp