ಗಾಂಜಾ ಖರೀದಿ ವೇಳೆ ರೆಡ್ ಹ್ಯಾಂಡ್ ಆಗಿ ಸಿಕಿಬಿದ್ದ ಕಿರುತೆರೆ ನಟಿ!

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಿರುತೆರೆ ನಟಿಯೊಬ್ಬರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿರುವ ಘಟನೆ ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದಿದೆ.

Published: 26th October 2020 01:37 PM  |   Last Updated: 26th October 2020 01:37 PM   |  A+A-


women-arrest

ಸಾಂದರ್ಭಿಕ ಚಿತ್ರ

Posted By : Srinivasamurthy VN
Source : PTI

ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಿರುತೆರೆ ನಟಿಯೊಬ್ಬರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿರುವ ಘಟನೆ ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದಿದೆ.

ಹಿಂದಿ ಕಿರುತೆರೆಯ ಉದಯೋನ್ಮುಖ ನಟಿಯೊಬ್ಬರು ಗಾಂಜಾ ಖರೀದಿ ವೇಳೆ ಮಫ್ತಿಯಲ್ಲಿದ್ದ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದು, ಆಕೆಯನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಅಂಧೇರಿಯಲ್ಲಿರುವ ಪ್ರದೇಶದಲ್ಲಿ ವ್ಯಕ್ತಿಯೊಬ್ಬನಿಂದ ನಟಿ ಗಾಂಜಾ ಖರೀದಿಗೆ ಬಂದಿದ್ದಳು. ಈ ವೇಳೆ ಈ  ಕುರಿತು ಮೊದಲೇ ಮಾಹಿತಿ ಪಡೆದು ಮಫ್ತಿ ಕಾರ್ಯಾಚರಣೆ ನಡೆಸಿದ ಎನ್ ಸಿಬಿ ಅಧಿಕಾರಿಗಳು ನಟಿ ಗಾಂಜಾ ಖರೀದಿ ಮಾಡುತ್ತಿದ್ದಂತೆಯೇ ಆಕೆಯನ್ನು ಗಾಂಜಾ ಸಮೇತ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಮುಂಬೈ ನ ವೆರ್ಸೋವಾದ ಎರಡು ಏರಿಯಾಗಳಲ್ಲಿ ಎನ್ ಸಿಬಿ ಅಧಿಕಾರಿಗಳು ಮಫ್ತಿಯಲ್ಲಿದ್ದರು.

ಈ ಕಾರ್ಯಾಚರಣೆ ವೇಳೆ ಅಧಿಕಾರಿಗಳು ನಟಿಯಿಂದ 99 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ನಟಿಗೆ ಗಾಂಜಾ ಮಾರಾಟ ಮಾಡುತ್ತಿದ್ದವನನ್ನು 20 ವರ್ಷ ಫೈಸಲ್ ಎಂದು ಗುರುತಿಸಲಾಗಿದ್ದು, ಆತನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸದ್ಯ ಇಬ್ಬರನ್ನು ಕಿಲಾ ಕೋರ್ಟ್ ಮುಂದೆ  ಹಾಜರು ಪಡಿಸಲಾಗಿದೆ.

ಇನ್ನು ಬಂಧಿತ ನಟಿ ಹಿಂದಿಯ ಖ್ಯಾತ ಧಾರಾವಾಹಿಗಳಾದ ಸಾವ್ ಧಾನ್ ಇಂಡಿಯಾ ಮತ್ತು ದೇವೋ ಕೆ ದೇವ್ ಮಹಾದೇವ್ ಸೇರಿದಂತೆ ಅನೇಕ ಜನಪ್ರಿಯ ಧಾರವಾಹಿಗಳಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಜೂನ್ 14 ರಂದು  ಮೃತಪಟ್ಟ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ  ಡ್ರಗ್ಸ್ ನಂಟು ಅಂಟಿಕೊಂಡಿದ್ದು, ಎನ್ ಸಿಬಿ ಅಧಿಕಾರಿಗಳು ಈ ಕುರಿತು ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಸುಶಾಂತ್ ಗೆಳತಿ ರಿಯಾ ಚಕ್ರವರ್ತಿ ಡ್ರಗ್ಸ್ ಜಾಲದ ಆರೋಪದಲ್ಲಿ ಸಿಲುಕಿ ಜಾಮೀನಿನ ಮೇಲೆ ಹೊರಬಂದಿದ್ದಾರೆ. ರಿಯಾ ಮುಂಬೈನ ಬೈಕುಲ್ಲಾ ಜೈಲಿನಲ್ಲಿ ಸುಮಾರು 28 ದಿನಗಳನ್ನು ಕಳೆದಿದ್ದರು.  ಅನೇಕ ಬಾಲಿವುಡ್ ಸೆಲೆಬ್ರಿಟಿಗಳನ್ನು ಎನ್‌ಸಿಬಿ,  ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು, ಇವರಲ್ಲಿ  ನಟಿಯರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್, ಸಾರಾ ಅಲಿ ಖಾನ್, ರಕುಲ್ ಪ್ರೀತ್ ಸಿಂಗ್ ಕೂಡ ಸೇರಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp