ಕೋವಿಡ್-19: ಬಂಗಾಳಕ್ಕೆ ದುರ್ಗಾ ಪೂಜಾ ಶಾಕ್; ಒಂದೇ ದಿನ 4 ಸಾವಿರಕ್ಕೂ ಅಧಿಕ ಹೊಸ ಸೋಂಕು ಪ್ರಕರಣ!

ಹೊಸ ಸೋಂಕು ಪ್ರಕರಣಗಳಲ್ಲಿ ಕಳೆದೊಂದು ವಾರದಿಂದ ಕನಿಷ್ಟ ಸಂಖ್ಯೆ ದಾಖಲಿಸುತ್ತಿದ್ದ ಪಶ್ಚಿಮ ಬಂಗಾಳ ಇದೀಗ ದಿಢೀರನೆ ತನ್ನ ಹೊಸ ಸೋಂಕಿತರ ಸಂಖ್ಯೆಯನ್ನು ಹೆಚ್ಚಿಸಿಕೊಂಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕೋಲ್ಕತಾ: ಹೊಸ ಸೋಂಕು ಪ್ರಕರಣಗಳಲ್ಲಿ ಕಳೆದೊಂದು ವಾರದಿಂದ ಕನಿಷ್ಟ ಸಂಖ್ಯೆ ದಾಖಲಿಸುತ್ತಿದ್ದ ಪಶ್ಚಿಮ ಬಂಗಾಳ ಇದೀಗ ದಿಢೀರನೆ ತನ್ನ ಹೊಸ ಸೋಂಕಿತರ ಸಂಖ್ಯೆಯನ್ನು ಹೆಚ್ಚಿಸಿಕೊಂಡಿದೆ.

ಹೌದು.. ಪಶ್ಚಿಮ ಬಂಗಾಳದ ಪ್ರಮುಖ ಹಬ್ಬಗಳಲ್ಲಿ ಒಂದಾದ ದುರ್ಗಾ ಪೂಜಾ ಹಬ್ಬದ ಆಚರಣೆ ಆ ರಾಜ್ಯಕ್ಕೆ ತಲೆನೋವಾಗಿ ಪರಿಣಮಿಸಿದ್ದು, ಕೋವಿಡ್ ಮಾರ್ಗಸೂಚಿ ಪಾಲಿಸದೇ ಹೊರಗೆ ಬರುತ್ತಿರುವ ಜನರಿಂದಾಗಿ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ದುರ್ಗಾ ಪೂಜಾ ಹಬ್ಬದ ಸಂಭ್ರಮದ ವಾತಾವರಣವೇ ಬಂಗಾಳ ಸರ್ಕಾರಕ್ಕೆ ಶಾಪವಾಗಿ ಪರಿಣಮಿಸಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಬರೊಬ್ಬರಿ 4 ಸಾವಿರಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.

ಬಂಗಾಳ ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಅನ್ವಯ ಕಳೆದ 24 ಗಂಟೆಗಳ ಅವಧಿಯಲ್ಲಿ ಪಶ್ಚಿಮ ಬಂಗಾಳದಲ್ಲಿ 4,127 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,49,701ಕ್ಕೆ ಏರಿಕೆಯಾಗಿದೆ. ಈ ಪೈಕಿ 3,857 ಮಂದಿ ನಿನ್ನೆ ಗುಣಮುಖರಾಗಿದ್ದು, ಒಟ್ಟಾರೆ ಗುಣಮುಖರ ಸಂಖ್ಯೆ 3,12,684 ಕ್ಕೆ ಏರಿಕೆಯಾಗಿದೆ. ಇನ್ನು ನಿನ್ನೆ ಒಂದೇ ದಿನ 60 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ರಾಜ್ಯದಲ್ಲಿ ಕೋವಿಡ್-19ಗೆ ಬಲಿಯಾದವರ ಸಂಖ್ಯೆ 6,487ಕ್ಕೆ ಏರಿಕೆಯಾಗಿದೆ.

ಇನ್ನು ಶನಿವಾರ ಕೂಡ ಬಂಗಾಳದಲ್ಲಿ  4,148 ಹೊಸ ಸೋಂಕು ಪ್ರಕರಣಗಳು ದಾಖಲಾಗಿತ್ತು. ಕಳೆದ ಕೆಲ ದಿನಗಳಿಂದ ಹೊಸ ಸೋಂಕು ಪ್ರಕರಣಗಳ ಸಂಖ್ಯೆಗಳಿಗಿಂತ ಗುಣಮುಖರ ಪ್ರಮಾಣ ಹೆಚ್ಚಾಗಿತ್ತು. ಆದರೆ 2ನೇ ಬಾರಿಗೆ ಗುಣಮುಖರ ಸಂಖ್ಯೆಗಿಂತ ಹೊಸ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com