ಚಳಿಗಾಲ ತಂದ ಸಂಕಷ್ಟ: ದೆಹಲಿ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳ, ನಿನ್ನೆ 4136 ಮಂದಿಗೆ ಸೋಂಕು

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೆ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದ್ದು, ಒಂದು ವಾರದ ಬಳಿಕ ಮತ್ತೆ ಹೊಸ ಸೋಂಕಿತರ ಸಂಖ್ಯೆ 4 ಸಾವಿರ ಗಡಿ ದಾಟಿದೆ.
ಕೊರೊನಾ ಸೋಂಕು
ಕೊರೊನಾ ಸೋಂಕು

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೆ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದ್ದು, ಒಂದು ವಾರದ ಬಳಿಕ ಮತ್ತೆ ಹೊಸ ಸೋಂಕಿತರ ಸಂಖ್ಯೆ 4 ಸಾವಿರ ಗಡಿ ದಾಟಿದೆ.

ನಿನ್ನೆ ಒಂದೇ ದಿನ ದೆಹಲಿಯಲ್ಲಿ 4136 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೆಹಲಿಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,56,656ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ 3826 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಗುಣಮುಖರ ಸಂಖ್ಯೆ 3,23,654ಕ್ಕೆ ಏರಿಕೆಯಾಗಿದೆ. 

ಇನ್ನು ನಿನ್ನೆ ದೆಹಲಿಯಲ್ಲಿ 33 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೆಹಲಿಯಲ್ಲಿ ಸಾವಿಗೀಡಾದ ಒಟ್ಟಾರೆ ಸೋಂಕಿತರ ಸಂಖ್ಯೆ 6258ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೆಹಲಿಯಲ್ಲಿ 26, 744 ಸಕ್ರಿಯ ಪ್ರಕರಣಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com