ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್'ಗೆ ಕೊರೋನಾ ಪಾಸಿಟಿವ್

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. 
ಅಜಿತ್ ಪವಾರ್
ಅಜಿತ್ ಪವಾರ್

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. 

ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದ್ದು, ಅಜಿತ್ ಪವಾರ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಮುಂಬೈ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿಸಿದೆ. 

ಕೆಲ ದಿನಗಳ ಹಿಂದಷ್ಟೇ ಅಜಿತ್ ಪವಾರ್ ಅವರು ಪ್ರವಾಹ ಪೀಡಿದ ಪ್ರದೇಶಗಳಾದ ಪುಣೆ ಹಾಗೂ ಸೊಲ್ಲಾಪುರ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇದಾದ ಬಳಿಕ ಪವಾರ್ ಅವರಲ್ಲಿ ಜ್ವರ ಹಾಗೂ ಕೆಲ ಲಕ್ಷಣಗಳು ಕಾಣಿಸಿಕೊಂಡಿತ್ತು.

ನಂತರ ಕೊರೋನಾ ಪರೀಕ್ಷೆ ಮಾಡಿಸಲಾಗಿತ್ತಾದರೂ, ಫಲಿತಾಂಶ ನೆಗೆಟಿವ್ ಬಂದಿತ್ತು. ನಂತರ ಅಜಿತ್ ಅವರು ಮುಂಜಾಗ್ರತಾ ಕ್ರಮವಾಗಿ ಕ್ವಾರಂಟೈನ್ ನಲ್ಲಿರುವುದಾಗಿ ತಿಳಿಸಿದ್ದರು. ಇದೀಗ ಮತ್ತೆ ಅಜಿತ್ ಅವರನ್ನು ಪರೀಕ್ಷೆಗೊಳಪಡಿಸಲಾಗಿದ್ದು, ವೈದ್ಯಕೀಯ ವರದಿಯಲ್ಲಿ ಸೋಂಕು ತಗುಲಿದೆ ಎಂದು ತಿಳಿದುಬಂದಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com