ಬುಧವಾರ ಬಿಹಾರದಲ್ಲಿ ರಾಹುಲ್ ಗಾಂಧಿ ಎರಡು ಚುನಾವಣಾ ರ‍್ಯಾಲಿ

ವಿಧಾನಸಭಾ ಚುನಾವಣೆ ನಡೆಯುತ್ತಿರುವ ಬಿಹಾರದಲ್ಲಿ ಬುಧವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಎರಡು ಚುನಾವಣಾ ರ‍್ಯಾಲಿಗಳಲ್ಲಿ ಭಾಷಣ ಮಾಡಲಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ವಿಧಾನಸಭಾ ಚುನಾವಣೆ ನಡೆಯುತ್ತಿರುವ ಬಿಹಾರದಲ್ಲಿ ಬುಧವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಎರಡು ಚುನಾವಣಾ ರ‍್ಯಾಲಿಗಳಲ್ಲಿ ಭಾಷಣ ಮಾಡಲಿದ್ದಾರೆ.

ವಾಲ್ಮಿಕಿ ನಗರ್ ಮತ್ತು ಕುಶ್ವೇಶ್ವರ್ ಅಸ್ಥಾನದಲ್ಲಿ ಚುನಾವಣಾ ರ‍್ಯಾಲಿ ನಡೆಸಿ ಜನತೆಯನ್ನುದ್ದೇಶಿಸಿ ರಾಹುಲ್ ಗಾಂಧಿ ಭಾಷಣ ಮಾಡಲಿದ್ದಾರೆ.

ಅಕ್ಟೋಬರ್ 28, ನವೆಂಬರ್ 3 ಮತ್ತು ನವೆಂಬರ್ 7 ರಂದು ಮೂರು ಹಂತಗಳಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ನವೆಂಬರ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.

ಈ ಮಧ್ಯೆ ಜೆಡಿಯು , ಮತ್ತಿತರ ಎರಡು ಪಕ್ಷಗಳೊಂದಿಗೆ ಬಿಜೆಪಿ ಪೈಪೋಟಿ ನಡೆಸುತ್ತದ್ದರೆ, ಆರ್ ಜೆಡಿ, ಎಡ ಪಕ್ಷಗಳೊಂದಿಗೆ ಮಹಾಘಟಬಂಧನ್ ಬ್ಯಾನರ್ ಅಡಿಯಲ್ಲಿ ಕಾಂಗ್ರೆಸ್ ಹೋರಾಟಕ್ಕಿಳಿದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com