ಹರಿಯಾಣ: ಕಾಲೇಜ್ ಮುಂದೆಯೇ ವಿದ್ಯಾರ್ಥಿನಿಗೆ ಗುಂಡಿಕ್ಕಿ ಹತ್ಯೆ, ಇಬ್ಬರ ಬಂಧನ

ಕಾಲೇಜ್ ವಿದ್ಯಾರ್ಥಿಗಳು ಮತ್ತು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದ 21 ವರ್ಷದ ಯುವತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಇಬ್ಬರು ಆರೋಪಿಗಳನ್ನು ಹರಿಯಾಣ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಂಡೀಗಢ: ಕಾಲೇಜ್ ವಿದ್ಯಾರ್ಥಿಗಳು ಮತ್ತು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದ 21 ವರ್ಷದ ಯುವತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಇಬ್ಬರು ಆರೋಪಿಗಳನ್ನು ಹರಿಯಾಣ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಸೋಮವಾರ ಮಧ್ಯಾಹ್ನ ಫರಿದಾಬಾದ್​ನ ಬಲ್ಲಬ್ಗರ್​​​ನ ಕಾಲೇಜಿನ ಮುಂದೆ ಈ ಘಟನೆ ನಡೆದಿದ್ದು, ಪರೀಕ್ಷೆ ಬರೆದು ಹೊರ ಬಂದಿದ್ದ ಬಿ.ಕಾಂ ವಿದ್ಯಾರ್ಥಿಯನ್ನು ಕಾರಿನಲ್ಲಿ ಅಪಹರಿಸಲು ಮುಂದಾದಾಗ, ಯುವತಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾಳೆ. ಈ ವೇಳೆ ಪಾಯಿಂಟ್​ ಬ್ಲಾಕ್​ ರೇಂಜ್​ನ ಗನ್ ನಿಂದ ಗುಂಡು ಹಾರಿಸಿ ಭೀಕರ ಹತ್ಯೆ ಮಾಡಲಾಗಿದೆ. ಈ ಘಟನೆಯ ದೃಶ್ಯಗಳು ಇಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್​ ಆಗಿತ್ತು. ಘಟನೆ ಖಂಡಿಸಿ ವಿದ್ಯಾರ್ಥಿಗಳು ಮತ್ತು ಸ್ಥಳೀಯರು ಪ್ರತಿಭಟನೆ ನಡೆಸಿದ್ದರು.

ಪ್ರಕರಣದ ಶೀಘ್ರ ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಅವರು ಹೇಳಿದ್ದಾರೆ.

ಇನ್ನು ಮುಖ್ಯ ಆರೋಪಿ ತೌಸಿಫ್ ಮತ್ತು ಆತನ ಸಹಚರ ರೆಹಾನ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರನ್ನು ಫರಿದಾಬಾದ್ ಜಿಲ್ಲೆಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಎರಡು ದಿನಗಳ ಪೊಲೀಸ್ ವಶಕ್ಕೆ ಪಡೆಯಲಾಗಿದೆ.

ಹತ್ಯೆಯಾದ ಯುವತಿಯನ್ನು ನಿಖಿತಾ ಎಂದು ಗುರುತಿಸಲಾಗಿದೆ. ಅಂತಿಮ ವರ್ಷದ ಪರೀಕ್ಷೆ ಬರೆಯಲು ಕಾಲೇಜಿಗೆ ಆಗಮಿಸಿದ್ದಳು. ಈ ಘಟನೆ ವಿಡಿಯೋ ವೈರಲ್​ ಆಗುತ್ತಿದ್ದಂತೆ ರಾಷ್ಟ್ರೀಯ ಮಹಿಳಾ ಆಯೋಗ ಘಟನೆ ಕುರಿತು ಕ್ರಮ ತೆಗೆದುಕೊಳ್ಳುವಂತೆ ಹರಿಯಾಣ ಪೊಲೀಸರಿಗೆ ಪತ್ರ ಬರೆದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com