‘ಗೋ ಕೊರೋನಾ ಗೋ’ ಎಂದಿದ್ದ ಕೇಂದ್ರ ಸಚಿವ ರಾಮದಾಸ್ ಅಠಾವಳೆಗೆ ಕೋವಿಡ್-19 ಪಾಸಿಟಿವ್

ಕೇಂದ್ರ ಸಚಿವ ರಾಮದಾಸ್ ಅಠಾವಳೆ ಅವರಿಗೆ ಮಂಗಳವಾರ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಬಾಂಬೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

Published: 27th October 2020 03:31 PM  |   Last Updated: 27th October 2020 03:31 PM   |  A+A-


Ramdas Athawale

ರಾಮದಾಸ್ ಅಠಾವಳೆ

Posted By : Lingaraj Badiger
Source : The New Indian Express

ಮುಂಬೈ: ಕೇಂದ್ರ ಸಚಿವ ರಾಮದಾಸ್ ಅಠಾವಳೆ ಅವರಿಗೆ ಮಂಗಳವಾರ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಬಾಂಬೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನನಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ವೈದ್ಯರ ಸಲಹೆಯಂತೆ ನಾನು ಕೆಲವು ದಿನಗಳವರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳಿ. ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಮತ್ತು ಸುರಕ್ಷಿತವಾಗಿರಿ ಎಂದು ರಾಮದಾಸ್ ಅಠಾವಳೆ ಅವರು ಟ್ವೀಟ್ ಮಾಡಿದ್ದಾರೆ.

ನಿನ್ನೆಯಷ್ಟೇ ಬಾಲಿವುಡ್‌ ನಟಿ ಪಾಯಲ್‌ ಘೋಷ್‌ ಅವರು ಕೇಂದ್ರ ಸಚಿವ ರಾಮದಾಸ್‌ ಅಠಾವಳೆ ನೇತೃತ್ವದ ರಿಪಬ್ಲಿಕನ್‌ ಪಾರ್ಟಿ ಆಪ್‌ ಇಂಡಿಯಾಗೆ ಸೇರ್ಪಡೆಯಾಗಿದ್ದರು. ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪಾಯಲ್ ಘೋಷ್ ಮತ್ತು ಅಠಾವಳೆ ಜೊತೆಯಾಗಿಯೇ ನಿಂತಿದ್ದರು ಮತ್ತು ಕೇಂದ್ರ ಸಚಿವರು ಮಾಸ್ಕ್ ಅನ್ನು ಪೂರ್ಣ ಪ್ರಮಾಣದಲ್ಲಿ ಧರಿಸದಿರುವುದು ಈಗ ನಟಿ ಸೇರಿದಂತೆ ಪತ್ರಿಕಾಗೋಷ್ಠಿಯಲ್ಲಿದ್ದ ಎಲ್ಲರಿಗೂ ಆತಂಕ ಶುರುವಾಗಿದೆ.

ಅಠಾವಳೆ ಅವರು ಕಳೆದ ಫೆಬ್ರವರಿಯಲ್ಲಿ, ಮುಂಬೈನ ಚೀನಾ ರಾಯಭಾರಿ ಟ್ಯಾಂಗ್ ಗುಯೊಕೈ ಮತ್ತು ಬೌದ್ಧ ಭಿಕ್ಷುಗಳೊಂದಿಗೆ ‘ಗೋ ಕರೋನಾ ಗೋ’ ಎಂದು ಜಪಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು.

Stay up to date on all the latest ರಾಷ್ಟ್ರೀಯ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp