ಭ್ರಷ್ಟಾಚಾರ ಆರೋಪ: ಉತ್ತರಾಖಂಡ ಸಿಎಂ ರಾವತ್ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ತನಿಖಾ ದಳ(ಸಿಬಿಐ)ಕ್ಕೆ ಉತ್ತರಾಖಂಡ ಹೈಕೋರ್ಟ್ ಮಂಗಳವಾರ ಆದೇಶಿಸಿದೆ.
ತ್ರಿವೇಂದ್ರ ಸಿಂಗ್ ರಾವತ್
ತ್ರಿವೇಂದ್ರ ಸಿಂಗ್ ರಾವತ್

ಡೆಹ್ರಾಡೂನ್: ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ತನಿಖಾ ದಳ(ಸಿಬಿಐ)ಕ್ಕೆ ಉತ್ತರಾಖಂಡ ಹೈಕೋರ್ಟ್ ಮಂಗಳವಾರ ಆದೇಶಿಸಿದೆ.

ಸಿಎಂ ರಾವತ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಪತ್ರಕರ್ತರೊಬ್ಬರು, ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವೀಂದ್ರ ಮೈಥಾನಿ ಅವರು, ಈ ಸಂಬಂಧ ರಾವತ್ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ಡೆಹ್ರಾಡೂನ್ ಸಿಬಿಐ ಪೊಲೀಸ್ ಅಧೀಕ್ಷಕರಿಗೆ ನಿರ್ದೇಶಿಸಿದ್ದಾರೆ.

ಇದೇ ವೇಳೆ, ದೇಶದ್ರೋಹದ ಆರೋಪದ ಮೇಲೆ ಜುಲೈ 2020ರಲ್ಲಿ ಪತ್ರಕರ್ತರ ವಿರುದ್ಧ ದಾಖಲಾದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ನ್ಯಾಯಾಲಯ ಆದೇಶಿಸಿದೆ.

"ರಾಜ್ಯದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ವಿರುದ್ಧದ ಆರೋಪಗಳ ಸ್ವರೂಪವನ್ನು ಪರಿಗಣಿಸಿ, ಸತ್ಯವನ್ನು ಬಿಚ್ಚಿಡುವುದು ಸೂಕ್ತವೆಂದು ಈ ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ಇದು ರಾಜ್ಯದ ಹಿತದೃಷ್ಟಿಯಿಂದ ಮತ್ತು ಅನುಮಾನಗಳನ್ನು ನಿವಾರಿಸಲು ತನಿಖೆ ಅಗತ್ಯ ಇದೆ. ಹೀಗಾಗಿ ನ್ಯಾಯಾಲಯ ಸಿಬಿಐ ತನಿಖೆಗೆ ಆದೇಶಿಸುತ್ತದೆ ಎಂದು ನ್ಯಾಯಮೂರ್ತಿ ಮೈಥಾನಿ ಅವರು ತಿಳಿಸಿದ್ದಾರೆ. 

ಗೋ ಸೇವಾ ಅಯೋಗದ ಮುಖ್ಯಸ್ಥರ ನೇಮಕಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದ ಇಬ್ಬರು ಪತ್ರಕರ್ತರು, ಉಮೇಶ್ ಶರ್ಮಾ ಮತ್ತು ಶಿವ ಪ್ರಸಾದ್ ಅವರು ಸಿಬಿಐ ತನಿಖೆ ಕೋರಿ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com