ಉತ್ತರ ಪ್ರದೇಶ ಪರಿಷತ್ ಚುನಾವಣೆಯಲ್ಲಿ ಎಸ್ ಪಿ ಸೋಲಿಸಲು ಬಿಜೆಪಿಗೆ ಮಾಯಾವತಿ ಬೆಂಬಲ

ಮುಂಬರುವ ಉತ್ತರ ಪ್ರದೇಶ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ಬಿಎಸ್ ಪಿ ನಾಯಕಿ ಮಾಯಾವತಿ ತಿಳಿಸಿದ್ದಾರೆ. 
ಮಾಯಾವತಿ
ಮಾಯಾವತಿ

ಲಕ್ನೋ: ಮುಂಬರುವ ಉತ್ತರ ಪ್ರದೇಶ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ಬಿಎಸ್ ಪಿ ನಾಯಕಿ ಮಾಯಾವತಿ ತಿಳಿಸಿದ್ದಾರೆ. 


'ಸಮಾಜವಾದಿ ಪಕ್ಷದ ಎರಡನೆಯ ಅಭ್ಯರ್ಥಿಯ ವಿರುದ್ಧ ಪ್ರಾಬಲ್ಯ ಮೆರೆಯುವ ಯಾವುದೇ ಪಕ್ಷದ ಅಭ್ಯರ್ಥಿಯು ಬಿಎಸ್‌ಪಿ ಶಾಸಕರ ಮತ ಪಡೆದುಕೊಳ್ಳಲಿದ್ದಾರೆ' ಎಂದು ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವುದಾಗಿ ಮಾಯಾವತಿ ಪರೋಕ್ಷವಾಗಿ ತಿಳಿಸಿದ್ದಾರೆ.

ಯುಪಿಯಲ್ಲಿ ಲೋಕಸಭಾ ಚುನಾವಣೆಗೆ ಎಸ್ಪಿ ಜೊತೆ  ಸ್ಪರ್ಧಿಸಲು ನಾವು ನಿರ್ಧರಿಸಿದಾಗ, ಮೊದಲ ದಿನದಿಂದಲೇ ನಾವು ಕಠಿಣ ಪ್ರಚಾರ ಆರಂಭಿಸಿದ್ದೆವು ಎಂದು ಮಾಯಾವತಿ ತಿಳಿಸಿದ್ದಾರೆ.

ಮಹಾಘಟಬಂಧನದ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಕೌಟುಂಬಿಕ ಒಳಜಗಳದ ಕಾರಣದಿಂದಾಗಿ ಸಮಾಜವಾದಿ ಪಕ್ಷ ಹೆಚ್ಚಿನ ಮತ ಪಡೆಯಲು ಸಾಧ್ಯವಾಗಿಲ್ಲ ಎಂದು ಮಾಯಾವತಿ ತಿಳಿಸಿದ್ದಾರೆ.

ರಾಜ್ಯಸಭೆ ಚುನಾವಣೆಗೆ ತನ್ನ ಅಧಿಕೃತ ಅಭ್ಯರ್ಥಿಯಾಗಿ ರಾಮ್‌ಜಿ ಗೌತಮ್ ಅವರ ನಾಮನಿರ್ದೇಶನ ಮಾಡಿರುವುದನ್ನು ವಿರೋಧಿಸಿ ಬಹುಜನ ಸಮಾಜಪಕ್ಷದ ಏಳು ಮಂದಿ ಶಾಸಕರು ಪಕ್ಷದ ವಿರುದ್ಧ ಬಂಡಾಯವೆದ್ದಿದ್ದರು. ಬಂಡಾಯವೆದ್ದಿದ್ದ  ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com