ಮಾಕ್ರೋನ್ ವಿರುದ್ಧ ಪ್ರತಿಭಟನೆ, ಕಾಂಗ್ರೆಸ್ ಶಾಸಕ ಸೇರಿದಂತೆ 2 ಸಾವಿರ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲು

 ಯುರೋಪ್ ದೇಶದಲ್ಲಿ ಕಾರ್ಟೂನ್ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಫ್ರೆಂಚ್ ಅಧ್ಯಕ್ಷ ಇಮ್ಮಾನ್ಯುವೆಲ್ ಮಾಕ್ರೋನ್ ವಿರುದ್ಧ ಪ್ರತಿಭಟನೆ ನಡೆಸಿದ ಮಧ್ಯ ಪ್ರದೇಶದ ಕಾಂಗ್ರೆಸ್ ಶಾಸಕ ಆರಿಫ್ ಮಸೂದ್ ಮತ್ತಿತರ 2 ಸಾವಿರ ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕಾಂಗ್ರೆಸ್ ಶಾಸಕ ಆರಿಫ್ ಮಸೂದ್
ಕಾಂಗ್ರೆಸ್ ಶಾಸಕ ಆರಿಫ್ ಮಸೂದ್

ಭೂಪಾಲ್:  ಯುರೋಪ್ ದೇಶದಲ್ಲಿ ಕಾರ್ಟೂನ್ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಫ್ರೆಂಚ್ ಅಧ್ಯಕ್ಷ ಇಮ್ಮಾನ್ಯುವೆಲ್ ಮಾಕ್ರೋನ್ ವಿರುದ್ಧ ಪ್ರತಿಭಟನೆ ನಡೆಸಿದ ಮಧ್ಯ ಪ್ರದೇಶದ ಕಾಂಗ್ರೆಸ್ ಶಾಸಕ ಆರಿಫ್ ಮಸೂದ್ ಮತ್ತಿತರ 2 ಸಾವಿರ ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕೋವಿಡ್-19 ನಿರ್ಬಂಧ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಅವರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರಿಫ್ ಮಸೂದ್, ಕೆಲ ಧಾರ್ಮಿಕ ಮುಖಂಡರು ಸೇರಿದಂತೆ 2 ಸಾವಿರ ಮಂದಿ ವಿರುದ್ಧ ಐಪಿಸಿ ಸೆಕ್ಷನ್ 188ರ( ಸರ್ಕಾರಿ ಆದೇಶಕ್ಕೆ ಅಗೌರವ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಲೈಯಾ ಪೊಲೀಸ್ ಠಾಣೆ ಅಧಿಕಾರಿ ಡಿ.ಪಿ.ಸಿಂಗ್ ಹೇಳಿದ್ದಾರೆ.

ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಜನರು ಸೇರದಂತೆ ಜಿಲ್ಲಾಡಳಿತ ಜಾರಿಗೊಳಿಸಿದ್ದ ಆದೇಶವನ್ನು ಪ್ರತಿಭಟನಾಕಾರರು ಉಲ್ಲಂಘಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಫ್ರಾನ್ಸ್‌ನಲ್ಲಿ ಪ್ರವಾದಿ ಮಹಮ್ಮದ್ ಅವರ ಕಾರ್ಟೂನ್ ಗೆ ಸಂಬಂಧಿಸಿದ ವಿವಾದದ ಬಗ್ಗೆ ಕಾಂಗ್ರೆಸ್ ಶಾಸಕರು ಮುಸ್ಲಿಂ ಧಾರ್ಮಿಕ ಮುಖಂಡರು ಮತ್ತು ಸಮುದಾಯದ ಸದಸ್ಯರೊಂದಿಗೆ ಗುರುವಾರ ಮ್ಯಾಕ್ರಾನ್ ವಿರುದ್ಧ ಇಕ್ಬಾಲ್ ಮೈದಾನದಲ್ಲಿ ಪ್ರತಿಭಟನೆ ನಡೆಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com