ಪತ್ನಿಯನ್ನು ಸಿಂಹಾಸನದಲ್ಲಿ ಕೂರಿಸಿ ಜೈಲಿಗೆ ಹೋದ ಲಾಲೂ- ನಿತೀಶ್ ಕುಮಾರ್ 

ಆರ್ ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಜೈಲಿಗೆ ಹೋದಾಗ ಅವರ ಪತ್ನಿ ರಾಬ್ರಿದೇವಿಯನ್ನು ಸಿಂಹಾಸನದಲ್ಲಿ ಕೂರಿಸಲಾಯಿತು. ಆದರೆ, ಅವರು  ಮಹಿಳೆಯರಿಗಾಗಿ ಏನು ಕೂಡಾ ಮಾಡಲಿಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಮುಖ್ಯಮಂತ್ರಿ ನಿತೀಶ್ ಕುಮಾರ್, ಲಾಲೂ ಪ್ರಸಾದ್ ಯಾದವ್
ಮುಖ್ಯಮಂತ್ರಿ ನಿತೀಶ್ ಕುಮಾರ್, ಲಾಲೂ ಪ್ರಸಾದ್ ಯಾದವ್

ಪಾಟ್ನಾ: ಆರ್ ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಜೈಲಿಗೆ ಹೋದಾಗ ಅವರ ಪತ್ನಿ ರಾಬ್ರಿದೇವಿಯನ್ನು ಸಿಂಹಾಸನದಲ್ಲಿ ಕೂರಿಸಲಾಯಿತು. ಆದರೆ, ಅವರು  ಮಹಿಳೆಯರಿಗಾಗಿ ಏನು ಕೂಡಾ ಮಾಡಲಿಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಪರ್ಬತ್ತದಲ್ಲಿ ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ನಿತೀಶ್ ಕುಮಾರ್, ಪ್ರತಿಪಕ್ಷಗಳು ಈಗ ಮಾತನಾಡುತ್ತಿದ್ದಾರೆ. ಆದರೆ, ಹಿಂದೆ ಮಹಿಳೆಯರ ಪರಿಸ್ಥಿತಿ ಹೇಗಿತ್ತು?ಅವರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿತ್ತು. ಯಾರೂ ಕೂಡಾ ಅವರ ಸಮಸ್ಯೆಗಳತ್ತ ಗಮನ ಹರಿಸಿರಲಿಲ್ಲ ಎಂದು ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ವಿರುದ್ಧ ವಾಗ್ದಾಳಿ ನಡೆಸಿದರು.

1990 ರಲ್ಲಿ ಬಿಹಾರ ಮುಖ್ಯಮಂತ್ರಿಯಾಗಿದ್ದ ಪ್ರಸಾದ್, 1997 ರಲ್ಲಿ ಬಹು ಕೋಟಿ ಮೇವು ಹಗರಣ ಪ್ರಕರಣಗಳಲ್ಲಿ ಜೈಲಿಗೆ ಕಳುಹಿಸಲ್ಪಟ್ಟ ನಂತರ ಅವರ ಪತ್ನಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು. ಆ ಸಂದರ್ಭದಲ್ಲಿ ದೊರೆತ ಅವಕಾಶದಿಂದ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ಮೀಸಲಾತಿ ಅಲ್ಲದೇ,  ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮಹಿಳೆಯರಿಗೆ ಮೀಸಲಾತಿ ನೀಡಲಾಯಿತು.ಈಗ ಬಿಹಾರ ಪ್ರಗತಿಯಾಗಿರುವುದಕ್ಕೆ ಬಹು ಮುಖ್ಯ ಕಾರಣ ಮಹಿಳೆಯರ ಪಾಲ್ಗೊಳ್ಳುವಿಕೆಯಾಗಿದೆ. ಮಹಿಳೆಯರಿಗೆ ಪ್ರೋತ್ಸಾಹ ನಮ್ಮ ಬದ್ಧತೆಯಾಗಿದೆ ಎಂದು ನಿತೀಶ್ ಕುಮಾರ್ ಹೇಳಿದರು.

ಹಿಂದಿನ ಆಡಳಿತ ವರ್ಗದವರಿಂದ ನಿರ್ಲಕ್ಷಿಸಲ್ಪಟ್ಟಿದ್ದ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಾ ದಲಿತರನ್ನು ಕರೆದೊಯ್ಯುವ ಮೂಲಕ ಸರ್ಕಾರ ಅಭಿವೃದ್ಧಿಯನ್ನು ಮಾಡಿದೆ. ನಿಷ್ ಪ್ರಯೋಜಕ ಮಾತುಗಳಲ್ಲಿ ತೊಡಗಿರುವ ಆರ್ ಜೆಡಿ ಬಗ್ಗೆ ಜನರಿಗೆ ಗೊತ್ತಿದೆ ಎಂದು ನಿತೀಶ್ ಕುಮಾರ್  ನುಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com