ಕೊವಿಡ್-19 ಭೀತಿ: ಮೊದಲ ಬಾರಿಗೆ ಫಿರಂಗಿ ವಾಹನದ ಬದಲಿಗೆ ವ್ಯಾನ್ ನಲ್ಲಿ ಮಾಜಿ ರಾಷ್ಟ್ಪಪತಿಗಳ ಪಾರ್ಥೀವ ಶರೀರದ ಮೆರವಣಿಗೆ!

ಇಂದು ನಿಧನರಾದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪಾರ್ಥೀವ ಶರೀರವನ್ನು ಕೊರೋನಾ ಸೋಂಕು ಭೀತಿ ಹಿನ್ನಲೆಯಲ್ಲಿ ಶಿಷ್ಠಾಚಾರ ಬದಿಗಿಟ್ಟು, ಫಿರಂಗಿ ವಾಹನದ ಬದಲಿಗೆ ವ್ಯಾನ್ ನಲ್ಲಿ ಮೆರವಣಿಗೆ ಮಾಡಲಾಯಿತು.
ವ್ಯಾನ್ ನಲ್ಲಿ ಪ್ರಣಬ್ ಮುಖರ್ಜಿ ಪಾರ್ಥೀವ ಶರೀರದ ರವಾನೆ
ವ್ಯಾನ್ ನಲ್ಲಿ ಪ್ರಣಬ್ ಮುಖರ್ಜಿ ಪಾರ್ಥೀವ ಶರೀರದ ರವಾನೆ

ನವದೆಹಲಿ: ಇಂದು ನಿಧನರಾದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪಾರ್ಥೀವ ಶರೀರವನ್ನು ಕೊರೋನಾ ಸೋಂಕು ಭೀತಿ ಹಿನ್ನಲೆಯಲ್ಲಿ ಶಿಷ್ಠಾಚಾರ ಬದಿಗಿಟ್ಟು, ಫಿರಂಗಿ ವಾಹನದ ಬದಲಿಗೆ ವ್ಯಾನ್ ನಲ್ಲಿ ಮೆರವಣಿಗೆ ಮಾಡಲಾಯಿತು.

ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ್ದ ಮಾರ್ಗಸೂಚಿ ಅನ್ವಯದಂತೆ ಪ್ರಣಬ್ ಮುಖರ್ಜಿ ಅವರ ಅಂತ್ಯಕ್ರಿಯೆ ನಡೆಸಲಾಗಿದ್ದು, ಇದಕ್ಕೂ ಮೊದಲು ನಡೆದ ಪಾರ್ಥೀವ ಶರೀರದ ಮೆರವಣಿಗೆ ನಡೆಸಲಾಯಿತು. ಸಾಮಾನ್ಯವಾಗಿ ಮಾಜಿ ರಾಷ್ಟ್ರಪತಿಗಳ ಪಾರ್ಥೀವ ಶರೀರವನ್ನು ಸೇನೆಯ ಫಿರಂಗಿ ವಾಹನದ  ಮೇಲೆ ಇಟ್ಟು ಸಾರ್ವಜನಿಕವಾಗಿ ಕಾಣುವಂತೆ ಅಂತ್ಯಕ್ರಿಯೆ ನಡೆಯುವ ಪ್ರದೇಶಕ್ಕೆ ತರಲಾಗುತ್ತದೆ. ಆದರೆ ಇಂದು ಪ್ರಣಬ್ ಮುಖರ್ಜಿ ಅವರ ಪಾರ್ಥೀವ ಶರೀರವನ್ನು ವ್ಯಾನ್ ನಲ್ಲಿ ರವಾನೆ ಮಾಡಲಾಯಿತು.  

ಈ ಬಗ್ಗೆ ಮಾಹಿತಿ ನೀಡಿರುವ ರಕ್ಷಣಾ ಇಲಾಖೆ, ಕೋವಿಡ್-19 ಸಾಂಕ್ರಾಮಿಕ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕಿದೆ. ಸಮಾಜಿಕ ಅಂತರ ಸೇರಿದಂತೆ ಹಲವು ನಿರ್ಬಂಧಗಳನ್ನು ಪ್ರಣಬ್ ಮುಖರ್ಜಿ ಅವರ ಅಂತ್ಯಕ್ರಿಯೆ ವೇಳೆ ಪಾಲನೆ ಮಾಡಲಾಗಿದೆ. ಇದೇ ಕಾರಣಕ್ಕೆ  ಫಿರಂಗಿ ವಾಹನದ ಬದಲಿಗೆ ವ್ಯಾನ್ ನಲ್ಲಿ ರವಾನೆ ಮಾಡಲಾಯಿತು ಎಂದು ಹೇಳಿದ್ದಾರೆ.

ದೆಹಲಿಯ ಲೋಧಿ ರಸ್ತೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಪ್ರಣಬ್ ಮುಖರ್ಜಿ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ನಡೆಸಲಾಯಿತು. 

ಕಳೆದ ಹಲವು ದಿನಗಳಿಂದ ತೀವ್ರ ಅನಾರೋಗ್ಯ ಸಮಸ್ಯೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ  ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ರಾಷ್ಟ್ರಪತಿ, ರಾಜಕೀಯ ಧುರೀಣ ಪ್ರಣಬ್‌ ಮುಖರ್ಜಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದರು. ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ  84 ವರ್ಷದ ಪ್ರಣಬ್ ಮುಖರ್ಜಿ ಅವರನ್ನು  ಭಾರತೀಯ ಸೇನೆಯ ರೀಸರ್ಚ್ ಅಂಡ್ ರೆಫೆರೆಲ್ (ಆರ್ ಅಂಡ್ ಆರ್) ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲದೆ, ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿ (Blood clot) ಸಮಸ್ಯೆ ಉದ್ಭವವಾಗಿತ್ತು. ಹೀಗಾಗಿ ಪ್ರಣಬ್ ಅವರಿಗೆ ತುರ್ತಾಗಿ ಮಿದುಳು ಚಿಕಿತ್ಸೆಯನ್ನು ಮಾಡಲಾಗಿತ್ತು.

ಆದರೆ, ಮಿದುಳು ಶಸ್ತ್ರ ಚಿಕಿತ್ಸೆ  ಮಾಡುವ ಮುನ್ನ ನಡೆಸಲಾಗಿದ್ದ ಕೊರೋನಾ ಪರೀಕ್ಷೆಯಲ್ಲಿ ಅವರಿಗೆ ಪಾಸಿಟಿವ್ ಬಂದಿತ್ತು. ಆದರೂ ಮಿದುಳು ಶಸ್ತ್ರ ಚಿಕಿತ್ಸೆಯನ್ನು ಮುಗಿಸಿ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ (ವೆಂಟಿಲೇಟರ್ ಸಪೋರ್ಟ್) ಮಾಡುವ ಮೂಲಕ ತೀವ್ರ ನಿಗಾ ವಹಿಸಲಾಗಿತ್ತು. ಈ ವೇಳೆ ಅವರು ಶಾಶ್ವತ ಕೋಮಾಕ್ಕೆ ಜಾರಿದ್ದರು.  ಆದರೆ, ಎಷ್ಟೇ ಪ್ರಯತ್ನ ನಡೆಸಿದರು ಪ್ರಣಬ್‌ ಮುಖರ್ಜಿ ಚಿಕಿತ್ಸೆೆಗೆ ಸ್ಪಂದಿಸಿಲ್ಲ. ಹೀಗಾಗಿ ಸಂಜೆ ವೇಳೆಗೆ ಅವರು ಮೃತಪಟ್ಟಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com