ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಪೂರ್ಣ: ಸೆಪ್ಟೆಂಬರ್ ಅಂತ್ಯಕ್ಕೆ ತೀರ್ಪು?

ತೀವ್ರ ಕುತೂಹಲ ಕೆರಳಿಸಿದ್ದ ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ಇದೇ ಸೆಪ್ಟೆಂಬರ್ ಅಂತ್ಯಕ್ಕೆ ತೀರ್ಪು ಘೋಷಣೆಯಾಗುವ ಸಾಧ್ಯತೆ ಇದೆ.
ಬಾಬ್ರಿ ಮಸೀದಿ
ಬಾಬ್ರಿ ಮಸೀದಿ

ಲಖನೌ: ತೀವ್ರ ಕುತೂಹಲ ಕೆರಳಿಸಿದ್ದ ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ಇದೇ ಸೆಪ್ಟೆಂಬರ್ ಅಂತ್ಯಕ್ಕೆ ತೀರ್ಪು ಘೋಷಣೆಯಾಗುವ ಸಾಧ್ಯತೆ ಇದೆ.

ಬಿಜೆಪಿಯ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಸೇರಿದಂತೆ 32 ಆರೋಪಿಗಳ ಪರ-ವಿರುದ್ಧ ವಕೀಲರು ತಮ್ಮ ವಾದ ಮಂಡಿಸಿದ್ದು, ವಿಚಾರಣೆ ಪ್ರಕ್ರಿಯೆಯು ಮಂಗಳವಾರ ಪೂರ್ಣಗೊಂಡಿದೆ. ವಿಚಾರಣೆ ಬಳಿಕ ಬುಧವಾರದಿಂದ ತೀರ್ಪು ಬರೆಸುವಿಕೆ ಆರಂಭಿಸುವುದಾಗಿ  ನ್ಯಾಯಾಧೀಶರಾದ ಎಸ್‌.ಕೆ.ಯಾದವ್‌ ತಿಳಿಸಿದ್ದಾರೆ. 

ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌, ಬಿಜೆಪಿ ನಾಯಕರಾದ ಮುರಳಿ ಮನೋಹರ್‌ ಜೋಶಿ, ಉಮಾ ಭಾರತಿ ಸೇರಿದಂತೆ ಹಲವರು ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಪ್ರಕರಣ ಸಂಬಂಧ ಸಿಬಿಐ ಆರೋಪಿಗಳ  ವಿರುದ್ಧ 350 ಸಾಕ್ಷಿಗಳನ್ನು ಹಾಗೂ 600 ದಾಖಲೆಗಳನ್ನು ನ್ಯಾಯಾಲಯದ ಮುಂದೆ ಸಲ್ಲಿಸಿದೆ. ಸುಪ್ರೀಂ ಕೋರ್ಟ್‌ ವಿಧಿಸಿರುವ ಗಡುವನ್ನು ಗಮನದಲ್ಲಿರಿಸಿಕೊಂಡು, ತಿಂಗಳಾಂತ್ಯದ ಒಳಗೇ ಪ್ರಕರಣದ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com