ಇನ್ನೂ 2 ವರ್ಷಗಳವರೆಗೆ ಸಾಲ ಮರುಪಾವತಿ ಅವಧಿ ವಿಸ್ತರಣೆ ಮಾಡಬಹುದು: ಸುಪ್ರೀಂ'ಗೆ ಕೇಂದ್ರ ಸರ್ಕಾರ

ಭಾರತೀಯ ರಿಸರ್ವ್ ಬ್ಯಾಂಕ್ ಸುತ್ತೋಲೆಯ ಪ್ರಕಾರ ಸಾಲ ಮರುಪಾವತಿ ಅವಧಿಯನ್ನು (ಮಾರಾಟೋರಿಯಂ) ಇನ್ನೂ 2 ವರ್ಷಗಳ ಕಾಲ ವಿಸ್ತರಣೆ ಮಾಡಬಹುದು ಎಂದು ಸುಪ್ರೀಂಕೋರ್ಟ್'ಗೆ ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಸುತ್ತೋಲೆಯ ಪ್ರಕಾರ ಸಾಲ ಮರುಪಾವತಿ ಅವಧಿಯನ್ನು (ಮಾರಾಟೋರಿಯಂ) ಇನ್ನೂ 2 ವರ್ಷಗಳ ಕಾಲ ವಿಸ್ತರಣೆ ಮಾಡಬಹುದು ಎಂದು ಸುಪ್ರೀಂಕೋರ್ಟ್'ಗೆ ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ. 

ಕಂತುಗಳ ಮುಂದೂಡಿಕೆ ಅವಧಿಯಲ್ಲಿನ ಬಡ್ಡಿಯ ಮೇಲೆ ಬಡ್ಡಿ ಮನ್ನಾ ಮಾಡುವ ಪ್ರಶ್ನೆ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸರ್ಕಾರ, ಬಡ್ಡಿ ಮೇಲಿನ ಬಡ್ಡಿ ಮನ್ನಾ ಮಾಡುವ ಬಗ್ಗೆ ಪರಿಹಾರ ಕಂಡುಕೊಳ್ಳಲು ಕೇಂದ್ರ, ಆರ್'ಬಿಐ ಹಾಗೂ ಬ್ಯಾಂಕರ್ಸ್ ಗಳ ಸಂಘ ಒಟ್ಟಾಗಿ ಕುಳಿತು ಮಾತುಕತೆ ನಡೆಸುವುದಾಗಿ ಹೇಳಿದೆ. 

ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸಾಲ ಮರುಪಾವತಿಯ ಅವಧಿಯಲ್ಲಿನ ಬಡ್ಡಿಯ ಮೇಲೆ ಬಡ್ಡಿ ಮನ್ನಾ ಮಾಡುವ ಕುರಿತು ಚರ್ಚಿಸಲು ಹಾಗೂ ಪರಿಹಾರವನ್ನು ಕಂಡುಕೊಳ್ಳಲು ಕೇಂದ್ರ, ಆರ್'ಬಿಐ ಹಾಗೂ ಬ್ಯಾಂಕರ್ ಗಳ ಅಸೋಸಿಯೇಶನ್'ನ ಅವಕಾಶ ನೀಡುವಂತೆ ಸುಪ್ರೀಂಕೋರ್ಟ್'ನ್ನು ವಿನಂತಿಸಿದರು. ನಮ್ಮ ಮುಂದೆ ಹೆಚ್ಚಿನ ಸಮಸ್ಯೆಗಳಿವೆ. ಜಿಡಿಪಿ ಶೇ.23ರಷ್ಟು ಕಡಿಮೆಯಾಗಿದೆ ಹಾಗೂ ಆರ್ಥಿಕತೆಗೆ ನಾವು ಹೆಚ್ಚು ಒತ್ತು ನೀಡುತ್ತಿದ್ದೇವೆಂದು ತಿಳಿಸಿದರು. 

ಕೇಂದ್ರ ಸರ್ಕಾರದಿಂದ ಅಫಿಡವಿಟ್ ಇನ್ನೂ ಸ್ವೀಕರಿಸದ ಕಾರಣ ಸುಪ್ರೀಂಕೋರ್ಟ್ ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿತು. 

ಕಂತು ಮುಂದೂಡಿಕೆ ಅವಧಿ (ಮಾರಾಟೋರಿಯಂ) ವಿಸ್ತರಣೆ ವೇಳೆಯಲ್ಲಿ ಸಾಲ ಮರುಪಾವತಿ ಮೇಲಿನ ಬಡ್ಡಿ ಮನ್ನಾ ವಿಚಾರಕ್ಕೆ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸುವಂತೆ ಕಳೆದ ವಾರ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ತಿಳಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com