ಸೆ. 14 ರಿಂದ ಸಂಸತ್ ಅಧಿವೇಶನ: ಬೆಳಗ್ಗೆ ಲೋಕಸಭೆ, ಮಧ್ಯಾಹ್ನ ರಾಜ್ಯಸಭೆ ಕಲಾಪ

ಸಂಸತ್ತಿನ ಮುಂಗಾರು ಅದಿವೇಶನ, ಇದೇ ಸೆಪ್ಟೆಂಬರ್ 14 ರಿಂದ ಆರಂಭವಾಗಲಿದ್ದು, ಈ ಕುರಿತು ಅಧಿಸೂಚನೆ ಹೊರಡಿಸಲಾಗಿದೆ.
ಭಾರತ ಸಂಸತ್ತು(ಸಂಗ್ರಹ ಚಿತ್ರ)
ಭಾರತ ಸಂಸತ್ತು(ಸಂಗ್ರಹ ಚಿತ್ರ)

ನವದೆಹಲಿ: ಸಂಸತ್ತಿನ ಮುಂಗಾರು ಅದಿವೇಶನ, ಇದೇ ಸೆಪ್ಟೆಂಬರ್ 14 ರಿಂದ ಆರಂಭವಾಗಲಿದ್ದು, ಈ ಕುರಿತು ಅಧಿಸೂಚನೆ ಹೊರಡಿಸಲಾಗಿದೆ.

ಅಕ್ಟೋಬರ್ 1 ರವರೆಗೆ ಕಲಾಪ ನಡೆಯಲಿದ್ದು, ಬೆಳಗ್ಗೆ ಲೋಕಸಭೆ, ಮಧ್ಯಾಹ್ನ ರಾಜ್ಯಸಭೆ ಕಲಾಪ ನಡೆಸಲು ತೀರ್ಮಾನಿಸಲಾಗಿದೆ. ಕೋವಿಡ್-19 ಮಾರ್ಗಸೂಚಿಯಂತೆ ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪಗಳನ್ನು ಬೇರೆ ಬೇರೆ ಸಮಯಗಳಲ್ಲಿ ನಿಗದಿಪಡಿಸಲಾಗಿದೆ.

ಸೋಂಕು ನಿಯಂತ್ರಣ ಉದ್ದೇಶದಿಂದ ವ್ಯಾಪಕ ಬಿಗಿ ಕ್ರಮಗಳನ್ನು ಕೈಗೊಂಡಿದ್ದು, ಸಂಸದರಿಗೆ ಪ್ರತ್ಯೇಕ ಮಾರ್ಗ ಸೂಚಿ ನಿಗದಿಪಡಿಸಲಾಗಿದೆ. ಸಂಸತ್ತಿನ ಸಿಬ್ಬಂದಿಗೂ ಸಹ ಇದೇ ರೀತಿಯಲ್ಲಿ ನಿಯಮಾಳಿಗಳನ್ನು ರೂಪಿಸಲಾಗಿದೆ.

ಸೋಂಕು ನಿಯಂತ್ರಣಕ್ಕೆ ವಿಶೇಷ ಗಮನಹರಿಸಲಾಗಿದೆ. ಎಲ್ಲಾ ಸಂಸದರ ವೈದ್ಯಕೀಯ ತಪಾಸಣೆ, ದೈಹಿಕ ಅಂತರ ಪಾಲನೆ ಅನುಸಾರ ಸದನಗಳಲ್ಲಿ ಆಸನ ವ್ಯವಸ್ಥೆಗೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಕೊರೊನಾ ಪರಿಸ್ಥಿತಿಯ ಕಾರಣ ಉಭಯ ಸದನಗಳಲ್ಲಿ ಹಿಂದೆಂದೂ ಇಲ್ಲದಷ್ಟು ಸುರಕ್ಷತಾ ಕ್ರಮಗಳಿಗೆ ಒತ್ತು  ನೀಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com