ಪತ್ರಕರ್ತರಿಗೆ ವಿಮಾ ಸೌಲಭ್ಯ ನೀಡುವಂತೆ ಯೋಗಿ ಸರ್ಕಾರಕ್ಕೆ ಪ್ರಿಯಾಂಕಾ ಗಾಂಧಿ ಒತ್ತಾಯ

ಕೋವಿಡ್‌ 19 ಸಾಂಕ್ರಾಮಿಕ ರೋಗ ಹರಡುತ್ತಿರುವ ನಡುವೆಯೂ ಸೋಂಕಿನ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ವಾರಿಯರ್ಸ್‌ಗಳಾಗಿರುವ ಪತ್ರಕರ್ತರಿಗೆ ಉತ್ತರ ಪ್ರದೇಶ ಸರ್ಕಾರ ವಿಮಾ ಸೌಲಭ್ಯ ಕಲ್ಪಿಸಬೇಕು ಎಂದು ಕಾಂಗ್ರೆಸ್ ಪಕ್ಷದ‌ ನಾಯಕಿ ಪ್ರಿಯಾಂಕ ವಾದ್ರಾ ಒತ್ತಾಯಿಸಿದ್ದಾರೆ.
ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ

ನವದೆಹಲಿ: ಕೋವಿಡ್‌ 19 ಸಾಂಕ್ರಾಮಿಕ ರೋಗ ಹರಡುತ್ತಿರುವ ನಡುವೆಯೂ ಸೋಂಕಿನ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ವಾರಿಯರ್ಸ್‌ಗಳಾಗಿರುವ ಪತ್ರಕರ್ತರಿಗೆ ಉತ್ತರ ಪ್ರದೇಶ ಸರ್ಕಾರ ವಿಮಾ ಸೌಲಭ್ಯ ಕಲ್ಪಿಸಬೇಕು ಎಂದು ಕಾಂಗ್ರೆಸ್ ಪಕ್ಷದ‌ ನಾಯಕಿ ಪ್ರಿಯಾಂಕ ವಾದ್ರಾ ಒತ್ತಾಯಿಸಿದ್ದಾರೆ.

ಲಕ್ನೋ ದಲ್ಲಿ ಯುವ ಪತ್ರಕರ್ತ ನೀಲಾಂಶು ಶುಲ್ಕಾ ಅವರು ಕೋವಿಡ್‌ 19 ಸೋಂಕಿನಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಪ್ರಿಯಾಂಕ ವಾದ್ರಾ ಅವರು ‘ಪತ್ರಕರ್ತರಿಗೆ ವಿಮಾ ಸೌಲಭ್ಯ ಕಲ್ಪಿಸಿ’ ಎಂದು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಮಾಡಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. 

‘ಈ ವಿಷಯವನ್ನು ನಾನು ಈ ಮೊದಲೇ ಪ್ರಸ್ತಾಪಿಸಿದ್ದೆ. ಈಗಲೂ ಹೇಳುತ್ತಿದ್ದೇನೆ. ಕೊರೊನಾ ಸೋಂಕು ಹರಡುತ್ತಿರುವ ಸಮಯದಲ್ಲಿ ಪತ್ರಕರ್ತರು ಸಕಾಲದಲ್ಲಿ ಮಾಹಿತಿ ಒದಗಿಸುವ ಕೆಲಸ ಮಾಡುತ್ತಿದ್ದಾರೆ ಅವರಿಗೆ ವಿಮಾ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com