ಗಡಿಯಲ್ಲಿ ಪಾಕ್ ಉದ್ಧಟತನ: ಅಪ್ರಚೋದಿತ ಗುಂಡಿನ ದಾಳಿಗೆ ಸೇನಾಧಿಕಾರಿ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಖೇರಿ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ತನ್ನ ಉದ್ಧಟತನವನ್ನು ಪ್ರದರ್ಶಿಸಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಭಾರತದ ಸೇನಾಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆಂದು ಬುಧವಾರ ವರದಿಗಳಿಂದ ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಖೇರಿ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ತನ್ನ ಉದ್ಧಟತನವನ್ನು ಪ್ರದರ್ಶಿಸಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಭಾರತದ ಸೇನಾಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆಂದು ಬುಧವಾರ ವರದಿಗಳಿಂದ ತಿಳಿದುಬಂದಿದೆ. 

ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಜ್ಯೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಬಲಿಯಾಗಿದ್ದಾರೆಂದು ವರದಿಗಳು ತಿಳಿಸಿವೆ. 

ಕಳೆದ ಭಾನುವಾರ ಕೂಡ ಪಾಕಿಸ್ತಾನ ಸೇನೆ ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘಿಸಿತ್ತು. ಈ ವೇಳೆ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಜೆಸಿಒ ರಾಜ್ವೀಂದರ್ ಸಿಂಗ್ ಅವರು ಹುತಾತ್ಮರಾಗಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com