ಗುಲಾಂ ನಬಿ ಆಜಾದ್, ಕಪಿಲ್ ಸಿಬಲ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಬೇಕು: ಕೇಂದ್ರ ಸಚಿವ ರಾಮದಾಸ್ ಅಥವಾಲೆ
ಕಾಂಗ್ರೆಸ್ ನ ಹಿರಿಯ ನಾಯಕರಾದ ಗುಲಾಂ ನಬಿ ಆಜಾದ್ ಮತ್ತು ಕಪಿಲ್ ಸಿಬಲ್ ಪಕ್ಷಕ್ಕೆ ರಾಜೀನಾಮೆ ನೀಡಿ ಭಾರತೀಯ ಜನತಾ ಪಾರ್ಟಿಗೆ ಸೇರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಕೇಂದ್ರ ಸಚಿವ ರಾಮದಾಸ್ ಅಥವಾಲೆ.
Published: 02nd September 2020 10:24 AM | Last Updated: 02nd September 2020 10:24 AM | A+A A-

ರಾಮದಾಸ್ ಅಥವಾಲೆ
ನವದೆಹಲಿ:ಕಾಂಗ್ರೆಸ್ ನ ಹಿರಿಯ ನಾಯಕರಾದ ಗುಲಾಂ ನಬಿ ಆಜಾದ್ ಮತ್ತು ಕಪಿಲ್ ಸಿಬಲ್ ಪಕ್ಷಕ್ಕೆ ರಾಜೀನಾಮೆ ನೀಡಿ ಭಾರತೀಯ ಜನತಾ ಪಾರ್ಟಿಗೆ ಸೇರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಕೇಂದ್ರ ಸಚಿವ ರಾಮದಾಸ್ ಅಥವಾಲೆ.
ಕೇಂದ್ರ ಎನ್ ಡಿಎ ಸರ್ಕಾರ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೂಡ ಮತ್ತೆ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಜತೆ ಕೈಜೋಡಿಸಿದ್ದಾರೆ ಎಂದು ಆ ಪಕ್ಷದ ಹೈಕಮಾಂಡ್ ನಿಂದ ಆರೋಪ ಎದುರಿಸುತ್ತಿರುವ ಗುಲಾಂ ನಬಿ ಆಜಾದ್ ಮತ್ತು ಕಪಿಲ್ ಸಿಬಲ್ ಅವರು ಜ್ಯೋತಿರಾಧಿತ್ಯ ಸಿಂಧಿಯಾ ಅವರಂತೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಬೇಕು ಎಂದರು.
ಕಾಂಗ್ರೆಸ್ ಅಧ್ಯಕ್ಷರ ಬಗ್ಗೆ ಆ ಪಕ್ಷದಲ್ಲಿ ವಿವಾದಗಳೆದ್ದಿವೆ. ಬಿಜೆಪಿ ಪರ ಕೆಲಸ ಮಾಡುತ್ತಿದ್ದೀರಿ ಎಂದು ಗುಲಾಂ ನಬಿ ಆಜಾದ್ ಮತ್ತು ಕಪಿಲ್ ಸಿಬಲ್ ವಿರುದ್ಧ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಹೀಗಾಗಿ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಬೇಕೆಂದು ನಾನು ಕೇಳುತ್ತೇನೆ ಎಂದು ಎಎನ್ ಐ ಸುದ್ದಿಸಂಸ್ಥೆ ಜತೆ ಮಾತನಾಡುತ್ತಾ ಹೇಳಿದರು.
ಬಿಜೆಪಿ ಇನ್ನೂ ಹಲವು ವರ್ಷಗಳ ಕಾಲ ಆಡಳಿತ ನಡೆಸಲಿದ್ದು ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಕೂಡ 350ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.