ಗೋವಾ ಸಿಎಂ ಪ್ರಮೋದ್ ಸಾವಂತ್ ಗೆ ಕೊರೋನಾ ಸೋಂಕು, ಹೋಮ್ ಐಸೊಲೋಷನ್ ನಲ್ಲಿ ಚಿಕಿತ್ಸೆ!

ಗೋವಾ ರಾಜ್ಯದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು. ಅವರನ್ನು ಹೋಮ್ ಐಸಲೇಷನ್ ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

Published: 02nd September 2020 12:14 PM  |   Last Updated: 02nd September 2020 12:14 PM   |  A+A-


Goa CM Pramod Sawant

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Posted By : Srinivasamurthy VN
Source : Online Desk

ಪಣಜಿ: ಗೋವಾ ರಾಜ್ಯದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು. ಅವರನ್ನು ಹೋಮ್ ಐಸಲೇಷನ್ ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ಈ ಬಗ್ಗೆ ಸ್ವತಃ ಪ್ರಮೋದ್ ಸಾವಂತ್ ಅವರು ಟ್ವೀಟ್ ಮಾಡಿದ್ದು, 'ನನಗೆ ಕೋವಿಡ್-19 ಪಾಸಿಟಿವ್ ಇರುವುದು ಪತ್ತೆಯಾಗಿದೆ. ಆದರೆ ಯಾವುದೇ ರೋಗಲಕ್ಷಣಗಳು ಇಲ್ಲದೇ ಇರುವ ಕಾರಣ ಮನೆಯಲ್ಲಿಯೇ ಇಸೊಲೇಶನ್ ನಲ್ಲಿ ಇರುತ್ತೇನೆ. ಮನೆಯಲ್ಲಿ ಇದ್ದುಕೊಂಡು ಕೆಲಸ ನಿರ್ವಹಿಸುತ್ತೇನೆ. ನನ್ನ ಪ್ರಾಥಮಿಕ  ಸಂಪರ್ಕಕ್ಕೆ ಬಂದವರು ಅಗತ್ಯ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾರೆ.

ಇನ್ನು ಗೋವಾದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 17,418ಕ್ಕೆ ಏರಿಕೆಯಾಗಿದ್ದು, ಈ ಪೈಕಿ 192 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಅಂತೆಯೇ 13,577 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Mamata1

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪಕ್ಷಕ್ಕೆ ಗೆಲುವು: ಮಮತಾ ಬ್ಯಾನರ್ಜಿ ಈಗ ಭಾರತದ ಪ್ರಬಲ ಪ್ರತಿಪಕ್ಷ ನಾಯಕಿಯೇ?


Result
ಹೌದು, ನಿರ್ವಿವಾದವಾಗಿ.
ಇಲ್ಲ, ಪ್ರಾದೇಶಿಕ ನಾಯಕಿ ಅಷ್ಟೇ.
flipboard facebook twitter whatsapp