ಕೊರೋನಾದಿಂದಾಗಿ ಪ.ಬಂಗಾಳದಲ್ಲಿ ಶೇ. 25 ರಷ್ಟು ವಿದ್ಯಾರ್ಥಿಗಳು ಮಾತ್ರ ಜೆಇಇ ಪರೀಕ್ಷೆ ಬರೆದಿದ್ದಾರೆ: ಮಮತಾ

ಕೊರೋನಾ ವೈರಸ್ ಸಾಂಕ್ರಾಮಿಕ ಪರಿಸ್ಥಿತಿ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಸೆಪ್ಟೆಂಬರ್ 1ರಂದು ನಡೆದ ಜೆಇಇ ಪರೀಕ್ಷೆಯನ್ನು ಶೇ. 25 ವಿದ್ಯಾರ್ಥಿಗಳು ಮಾತ್ರ ಬರೆದಿದ್ದಾರೆ.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಕೋಲ್ಕತಾ: ಕೊರೋನಾ ವೈರಸ್ ಸಾಂಕ್ರಾಮಿಕ ಪರಿಸ್ಥಿತಿ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಸೆಪ್ಟೆಂಬರ್ 1ರಂದು ನಡೆದ ಜೆಇಇ ಪರೀಕ್ಷೆಯನ್ನು ಶೇ. 25 ವಿದ್ಯಾರ್ಥಿಗಳು ಮಾತ್ರ ಬರೆದಿದ್ದಾರೆ. ರಾಜ್ಯದ ಶೇಕಡಾ 75 ರಷ್ಟು ಅಭ್ಯರ್ಥಿಗಳು ಜೆಇಇ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೇಳಿದ್ದಾರೆ.

ಪರೀಕ್ಷೆಗಾಗಿ ನಮ್ಮ ಸರ್ಕಾರವು ವಿದ್ಯಾರ್ಥಿಗಳಿಗೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿತ್ತು. ಆದರೂ ಪರೀಕ್ಷೆಯ ಮೊದಲ ದಿನವಾದ ಮಂಗಳವಾರ ಪರೀಕ್ಷೆಯ ಬರಯಬೇಕಿದ್ದ 4,652 ಅಭ್ಯರ್ಥಿಗಳ ಪೈಕಿ ಕೇವಲ 1,167 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ಮಮತಾ ತಿಳಿಸಿದ್ದಾರೆ.

"ವಿದ್ಯಾರ್ಥಿಗಳು ತೀವ್ರ ತೊಂದರೆಯಲ್ಲಿದ್ದಾರೆ. ಜೆಇಇ ಪರೀಕ್ಷೆಗಳಿಗೆ ಹಾಜರಾಗಲು ಅವರಿಗೆ ಸಾಧ್ಯವಾಗುತ್ತಿಲ್ಲ. ಇತರ ರಾಜ್ಯಗಳಲ್ಲಿ, ಸಾಂಕ್ರಾಮಿಕ ಪರಿಸ್ಥಿತಿಯಿಂದಾಗಿ ಶೇಕಡಾ 50 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿಲ್ಲ" ಎಂದು ಮಮತಾ ಬ್ಯಾನರ್ಜಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸಾಂಕ್ರಾಮಿಕ ಪರಿಸ್ಥಿತಿಯ ಮಧ್ಯೆ ಜೆಇಇ ಅನ್ನು ನಡೆಸದಂತೆ ಮುಖ್ಯಮಂತ್ರಿ ಈ ಹಿಂದೆ ಕೇಂದ್ರಕ್ಕೆ ಮನವಿ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com