ಅಧಿರ್ ರಂಜನ್ ಚೌಧರಿಯನ್ನು ಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿ: ಸೋನಿಯಾಗೆ ಅಬ್ದುಲ್ ಮನ್ನನ್ ಆಗ್ರಹ

ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿ(ಪಿಸಿಸಿ) ಅಧ್ಯಕ್ಷರಾಗಿ ಲೋಕಸಭೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ನೇಮಕ ಮಾಡುವಂತೆ ಪಶ್ಚಿಮ ಬಂಗಾಳ ವಿಧಾನಸಭೆಯ ಪ್ರತಿಪಕ್ಷದ ನಾಯಕ ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ಅಬ್ದುಲ್ ಮನ್ನನ್ ಅವರು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ
ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ

ಕೋಲ್ಕತಾ: ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿ(ಪಿಸಿಸಿ) ಅಧ್ಯಕ್ಷರಾಗಿ ಲೋಕಸಭೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ನೇಮಕ ಮಾಡುವಂತೆ ಪಶ್ಚಿಮ ಬಂಗಾಳ ವಿಧಾನಸಭೆಯ ಪ್ರತಿಪಕ್ಷದ ನಾಯಕ ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ಅಬ್ದುಲ್ ಮನ್ನನ್ ಅವರು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸಿದ್ದಾರೆ.

ಸೋಮೆನ್ ಮಿತ್ರ ಅವರ ನಿಧನದ ನಂತರ ರಾಜ್ಯ ಘಟಕದ ಅಧ್ಯಕ್ಷರ ಹುದ್ದೆ ಕಳೆದ ಒಂದು ತಿಂಗಳಿಂದ ಖಾಲಿ ಇದ್ದು, ಆ ಸ್ಥಾನ ಅಧಿರ್ ರಂಜನ್ ಚೌಧರ್ ಅವರನ್ನು ನೇಮಿಸುವಂತೆ ಸೋನಿಯಾ ಗಾಂಧಿಗೆ ಮನ್ನನ್ ಒತ್ತಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಿಸಿಸಿ ಅಧ್ಯಕ್ಷರಾಗಿದ್ದ ಸೋಮೆನ್ ಮಿತ್ರ ಅವರು ಜುಲೈ 30 ರಂದು ಮಿತ್ರಾ ನಿಧನರಾಗಿದ್ದು, ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅಲ್ಲದೆ ಅವರ ನಿಧನದ ನಂತರ ಪಕ್ಷದಲ್ಲಿ ತೀವ್ರ ಬಿಕ್ಕಟ್ಟ ಸೃಷ್ಟಿಯಾಗಿದ್ದು, ಉತ್ತರಾಧಿಕಾರಿ ಆಯ್ಕೆಯೂ ಕಗ್ಗಂಟಾಗಿ ಉಳಿದಿದೆ.

2021ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ಮಹತ್ವ ಪಡೆದುಕೊಂಡಿದ್ದು, ಹೊಸ ಅಧ್ಯಕ್ಷ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಈ ಹುದ್ದೆಗೆ ಸ್ವತಃ ಸ್ಪರ್ಧಿಯಾಗಿ ಪರಿಗಣಿಸಲ್ಪಟ್ಟಿರುವ ಮನ್ನನ್ ಅವರ ಆಪ್ತ ಮೂಲಗಳ ಪ್ರಕಾರ, ಪಕ್ಷದ ಹಿರಿಯ ಮುಖಂಡರು ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದು, ಲೋಕಸಭೆಯಲ್ಲಿ ಕಾಂಗ್ರೆಸ್ ಮುಖಂಡ ಚೌಧರಿ ಅವರನ್ನು ಪಿಸಿಸಿ ಮುಖ್ಯಸ್ಥರನ್ನಾಗಿ ನೇಮಿಸುವಂತೆ ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com