ಸಂಸತ್ ಅಧಿವೇಶನದ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಶಿವಸೇನೆ ಬೆಂಬಲ! 

ಅಚ್ಚರಿಯ ಬೆಳವಣಗೆಯೊಂದರಲ್ಲಿ ಸಂಸತ್ ಅಧಿವೇಶನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಶಿವಸೇನೆ ಬೆಂಬಲ ನೀಡಿದೆ. 

Published: 03rd September 2020 05:13 PM  |   Last Updated: 03rd September 2020 05:17 PM   |  A+A-


Shiv sena

ಸಂಗ್ರಹ ಚಿತ್ರ

Posted By : Srinivas Rao BV
Source : PTI

ಮುಂಬೈ: ಅಚ್ಚರಿಯ ಬೆಳವಣಗೆಯೊಂದರಲ್ಲಿ ಸಂಸತ್ ಅಧಿವೇಶನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಶಿವಸೇನೆ ಬೆಂಬಲ ನೀಡಿದೆ. ಮುಂಗಾರು ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪವನ್ನು ಕೈಬಿಟ್ಟಿರುವ ವಿಚಾರದಲ್ಲಿ ಶಿವಸೇನೆ ಕೇಂದ್ರ ಸರ್ಕಾರಕ್ಕೆ ಬೆಂಬಲ ಘೋಷಿಸಿದೆ. 

ಪ್ರಶ್ನೋತ್ತರ ಕಲಾಪವನ್ನು ಕೋವಿಡ್-19 ನಿಂದ ಉಂಟಾಗಿರುವ ತುರ್ತು ಕಾರಣಗಳಿಂದಾಗಿ ಕೈಬಿಡಲಾಗಿದೆ, ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ಶಿವಸೇನೆ ಕೇಂದ್ರ ಸರ್ಕಾರದ ಬೆಂಬಲಕ್ಕೆ ನಿಂತಿದೆ. 

ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ವಿಪಕ್ಷಗಳಿಂದ ಟೀಕೆಗಳು ವ್ಯಕ್ತವಾಗುತ್ತಿರುವಾಗಲೇ ಶಿವಸೇನೆ ಕೇಂದ್ರದ ಬೆಂಬಲಕ್ಕೆ ಧಾವಿಸಿರುವುದು ಅಚ್ಚರಿ ಮೂಡಿಸಿದೆ. ಈ ಬಗ್ಗೆ ಮಾತನಾಡಿರುವ ಶಿವಸೇನೆಯ ಸಂಸದ ಸಂಜಯ್ ರೌತ್, ಮುಂಗಾರು ಅಧಿವೇಶನ ನಡೆಯುತ್ತಿದ್ದರೂ ಪ್ರಶ್ನೋತ್ತರ ಕಲಾಪವನ್ನು ಕೈಬಿಡಲಾಗಿದೆ. ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು, ಟೀಕಿಸುವುದು ಸರಿಯಲ್ಲ, ಮಹಾರಾಷ್ಟ್ರದಲ್ಲಿ ಅಧಿವೇಶನ ಕೇವಲ 2 ದಿನಗಳಷ್ಟೇ ನಡೆಯುತ್ತಿದೆ ಎಂದು ಹೇಳಿದ್ದಾರೆ. 

Stay up to date on all the latest ರಾಷ್ಟ್ರೀಯ news
Poll
Covid-_Vaccine1

ರಾಜಕಾರಣಿಗಳಿಗೆ ಮೊದಲು ಕೋವಿಡ್-19 ಲಸಿಕೆ ನೀಡಬೇಕೇ?


Result
ಇಲ್ಲ, ಸಾಮಾನ್ಯ ಜನರಿಗೆ ಮೊದಲು
ಹೌದು, ಅವರು ನಮ್ಮ ನಾಯಕರು
flipboard facebook twitter whatsapp