ಲಡಾಖ್ ಸಂಘರ್ಷ: ರಾಜನಾಥ್ ಸಿಂಗ್ ರಿಂದ ಇಂದು ಸಂಜೆ ಚೀನಾ ರಕ್ಷಣಾ ಸಚಿವರ ಭೇಟಿ ಸಾಧ್ಯತೆ

ಲಡಾಖ್ ಸಂಘರ್ಷ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ರಷ್ಯಾ ಪ್ರವಾಸದಲ್ಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು 0ಶುಕ್ರವಾರ ಸಂಜೆ ಚೀನಾ ರಕ್ಷಣಾ ಸಚಿವ ವೈ ಫೆಂಗಿ ಅವರನ್ನು ಭೇಟಿ ಮಾಡಿ ಚರ್ಚಿಸುವ ಸಾಧ್ಯತೆ ಇದೆ.
ರಾಜನಾಥ್ ಸಿಂಗ್
ರಾಜನಾಥ್ ಸಿಂಗ್

ನವದೆಹಲಿ: ಲಡಾಖ್ ಸಂಘರ್ಷ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ರಷ್ಯಾ ಪ್ರವಾಸದಲ್ಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು 0ಶುಕ್ರವಾರ ಸಂಜೆ ಚೀನಾ ರಕ್ಷಣಾ ಸಚಿವ ವೈ ಫೆಂಗಿ ಅವರನ್ನು ಭೇಟಿ ಮಾಡಿ ಚರ್ಚಿಸುವ ಸಾಧ್ಯತೆ ಇದೆ.

ರಷ್ಯಾದ ಮಾಸ್ಕೊದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘದ ಸಭೆಯಲ್ಲಿ ಭಾಗವಹಿಸುತ್ತಿರು ಉಭಯ ದೇಶಗಳ ರಕ್ಷಣಾ ಸಚಿವರು ಸಭೆಯ ಹೊರಗೆ ಭೇಟಿ ಮಾಡಿ, ಭಾರತ-ಚೀನಾ ಗಡಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

ಚೀನಾ ರಕ್ಷಣಾ ಸಚಿವರು ಈಗಾಗಲೇ ರಾಜನಾಥ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸಲು ಸಮಯಾವಕಾಶ ಕೇಳಿದ್ದಾರೆ ಎಂದು ತಿಳಿದುಬಂದಿದ್ದು, ರಾಜನಾಥ್ ಸಿಂಗ್ ಸಹ ಸಭೆಗೆ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಮೇ ತಿಂಗಳ ಆರಂಭದಲ್ಲಿ ಪೂರ್ವ ಲಡಾಖ್‌ನ ಗಡಿರೇಖೆ ಸಂಘರ್ಷ ಉಲ್ಬಣಗೊಂಡ ನಂತರ  ಉಭಯ ದೇಶಗಳ ನಡುವಿನ ಮೊದಲ ಉನ್ನತ ಮಟ್ಟದ ಸಭೆ ಇದಾಗಲಿದೆ.

ನಾಲ್ಕು ದಿನಗಳ ಹಿಂದೆ ಮತ್ತೆ ಲಡಾಕ್ ನ ಪಾಂಗೊಂಗ್ ಸರೋವರದ ದಕ್ಷಿಣ ತೀರ ಪ್ರಾಂತ್ಯವನ್ನು ಆಕ್ರಮಿಸಿಕೊಳ್ಳಲು ಚೀನಾ ಸೇನೆ ಯತ್ನಿಸಿದ ಬಳಿಕ ಗಡಿಯಲ್ಲಿ ಮತ್ತಷ್ಟು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. 

ಉದ್ವಿಗ್ನ ಪರಿಸ್ಥಿತಿ ನಿವಾರಿಸಲು ಭಾರತ ಮತ್ತು ಚೀನಾ ಹಲವು ಸುತ್ತಿನ ರಾಜತಾಂತ್ರಿಕ ಮತ್ತು ಮಿಲಿಟರಿ ಮಟ್ಟದ ಮಾತುಕತೆಯಲ್ಲಿ ತೊಡಗಿವೆ. ಆದರೆ ಇದುವರೆಗೆ ಪರಿಹಾರ ಕಂಡುಕೊಂಡಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com