ಸೆಪ್ಟೆಂಬರ್ ತಿಂಗಳಾಂತ್ಯಕ್ಕೆ 10-12 ನೇ ತರಗತಿ ಸಿಬಿಎಸ್‌ಇ ವಿಭಾಗ ಪರೀಕ್ಷೆ ಸಾಧ್ಯತೆ

ಕೊರೋನಾ ಕಾರಣದಿಂದಾಗಿ ವಿಳಂಬವಾಗಿದ್ದ ಸಿಬಿಎಸ್ಇಯ 10-12 ನೇ ತರಗತಿಗಳ ವಿಭಾಗ ಪರೀಕ್ಷೆಯನ್ನು ಸೆಪ್ಟೆಂಬರ್ ತಿಂಗಳಾಂತ್ಯಕ್ಕೆ ನಡೆಯುವ ಸಾಧ್ಯತೆ ಇದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಕೊರೋನಾ ಕಾರಣದಿಂದಾಗಿ ವಿಳಂಬವಾಗಿದ್ದ ಸಿಬಿಎಸ್ಇಯ 10-12 ನೇ ತರಗತಿಗಳ ವಿಭಾಗ ಪರೀಕ್ಷೆಯನ್ನು ಸೆಪ್ಟೆಂಬರ್ ತಿಂಗಳಾಂತ್ಯಕ್ಕೆ ನಡೆಯುವ ಸಾಧ್ಯತೆ ಇದೆ. 

ಈ ಬಗ್ಗೆ ಸಿಬಿಎಸ್ಇ ಸುಪ್ರೀಂ ಕೋರ್ಟ್ ಗೆ ಸೆ.04 ರಂದು ಮಾಹಿತಿ ನೀಡಿದ್ದು,  ವಿಭಾಗ ಪರೀಕ್ಷೆಗಳನ್ನು ಸೆಪ್ಟೆಂಬರ್ ತಿಂಗಳಾಂತ್ಯಕ್ಕೆ ನಡೆಸಲು ಉದ್ದೇಶಿಸಿರುವುದಾಗಿ ಹೇಳಿದೆ. ಇದೇ ವೇಳೆ ಸುಗಮ ಪರೀಕ್ಷೆಗಳನ್ನು ನಡೆಸುವುದಕ್ಕಾಗಿ ಪರೀಕ್ಷಾ ಕೇಂದ್ರಗಳನ್ನು 1, 278 ಕ್ಕೆ ಏರಿಕೆ ಮಾಡಿರುವುದಾಗಿ ಸಿಬಿಎಸ್ಇ ತಿಳಿಸಿದೆ. 
 
ವಿಭಾಗ ಪರೀಕ್ಷೆ ನಡೆಸುವ ಸಿಬಿಎಸ್ಇಯ ನಿರ್ಧಾರದ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ ನ್ಯಾ. ಎ.ಎಂ ಖನ್ವಾಲಿಕರ್, ನ್ಯಾ. ದಿನೇಶ್ ಮಹೇಶ್ವರಿ, ಸಂಜೀವ್ ಖನ್ನಾ ಅವರಿದ್ದ ಪೀಠ ಪರಿಗಣಿಸಿದ್ದು ವಿಚಾರಣೆ ಕೈಗೆತ್ತಿಕೊಂಡಿದೆ. 

ಈಗ ಸಿಬಿಎಸ್ಇ ಸೆಪ್ಟೆಂಬರ್ ತಿಂಗಳಾಂತ್ಯಕ್ಕೆ ಪರೀಕ್ಷೆ ನಡೆಸುವುದಾಗಿ ಕೋರ್ಟ್ ಗೆ ಮಾಹಿತಿ ನೀಡಿದೆ. ಮೂಲಗಳ ಪ್ರಕಾರ ಸಿಬಿಎಸ್ಇ ವಿಭಾಗ ಪರೀಕ್ಷೆ ನಡೆಸುವುದರ ಬಗ್ಗೆ ಶಾಲೆಗಳು ಹಾಗೂ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗಿದೆ. 

ಇದಕ್ಕೂ ಮುನ್ನ ಪರೀಕ್ಷೆ ನಡೆಸುವುದರ ಬಗ್ಗೆ ಸಿಬಿಎಸ್ಇ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ಪ್ರತಿಕ್ರಿಯೆ ಕೇಳಿತ್ತು. ಬಹುತೇಕ ಅಭಿಪ್ರಾಯ, ಪ್ರತಿಕ್ರಿಯೆಗಳು ಪರೀಕ್ಷೆಗಳನ್ನು ರದ್ದುಗೊಳಿಸುವುದರ ಪರವಾಗಿಯೇ ಇತ್ತು. ಆದರೂ ಮಂಡಳಿ ಪರೀಕ್ಷೆ ನಡೆಸಲು ಮುಂದಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com