ಕಾಶ್ಮೀರ: ಎನ್ಕೌಂಟರ್ ನಲ್ಲಿ ಓರ್ವ ಉಗ್ರ ಹತ, ಮೂವರು ಭದ್ರತಾ ಸಿಬ್ಬಂದಿಗೆ ಗಾಯ 

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ಅಪರಿಚಿತ ಉಗ್ರನೊಬ್ಬ ಸಾವನ್ನಪ್ಪಿದ್ದು, ಸೇನಾಧಿಕಾರಿ ಸೇರಿದಂತೆ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ಸೇನೆ
ಭಾರತೀಯ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ಅಪರಿಚಿತ ಉಗ್ರನೊಬ್ಬ ಸಾವನ್ನಪ್ಪಿದ್ದು, ಸೇನಾಧಿಕಾರಿ ಸೇರಿದಂತೆ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ನಂತರ ಭದ್ರತಾ ಪಡೆಗಳು ಉತ್ತರ ಕಾಶ್ಮೀರ ಜಿಲ್ಲೆಯ ಪಟ್ಟನ್ ಪ್ರದೇಶದ ಯೆಡಿಪೊರಾದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ಪ್ರಾರಂಭಿಸಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆ ಎನ್‌ಕೌಂಟರ್‌ ಆಗಿ ಮಾರ್ಪಟ್ಟಿತು ಎಂದು ಅವರು ಹೇಳಿದರು.

ಗುಂಡಿನ ಕಾಳಗದಲ್ಲಿ ಸೇನೆಯ ಅಧಿಕಾರಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಅಧಿಕಾರಿಯನ್ನು ಇಲ್ಲಿನ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಗಾಯಗೊಂಡ ಸೇನಾಧಿಕಾರಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com