ಜೆಇಇ, ನೀಟ್ ಪರೀಕ್ಷೆ: ಆದೇಶ ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೋವಿಡ್  -19 ಸಾಂಕ್ರಾಮಿಕ ರೋಗಕಾರಣದಿಂದ  ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡಬೇಕೆಂದು ಕೋರಿ ಆರು ರಾಜ್ಯಗಳ ಬಿಜೆಪಿಯೇತರ ಪಕ್ಷಗಳ ನಾಯಕರು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸೆಪ್ಟೆಂಬರ್ 4 ರಂದು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಜೆಇಇ, ನೀಟ್ ಪರೀಕ್ಷೆ: ಆದೇಶ ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಕೋವಿಡ್  -19 ಸಾಂಕ್ರಾಮಿಕ ರೋಗಕಾರಣದಿಂದ  ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡಬೇಕೆಂದು ಕೋರಿ ಆರು ರಾಜ್ಯಗಳ ಬಿಜೆಪಿಯೇತರ ಪಕ್ಷಗಳ ನಾಯಕರು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸೆಪ್ಟೆಂಬರ್ 4 ರಂದು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಬಾಕಿ ಉಳಿದ ಜೆಇಇ ಮುಳ್ಯ ಪ್ರಈಕ್ಷೆಗಳು  ಸೆಪ್ಟೆಂಬರ್ 5 ಮತ್ತು 6 ರಂದು ನಿಗದಿಯಂತೆ ನಡೆಯಲಿದ್ದು, ಸೆಪ್ಟೆಂಬರ್ 13 ರಂದು ನೀಟ್ ನಡೆಸಲಾಗುವುದು.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಬಿ.ಆರ್.ಗವಾಯಿ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ  ನ್ಯಾಯಪೀಠವು ಪರಿಶೀಲನಾ ಅರ್ಜಿಯ ವಿಚಾರಣೆ ನಡೆಸಿದೆ. 

ಈ ಹಿಂದೆ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮತ್ತು ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿದ್ದ ರಾಷ್ಟ್ರೀಯ ಅರ್ಹತೆ ಕಂ ಪ್ರವೇಶ ಪರೀಕ್ಷೆ (ನೀಟ್) ಅನ್ನು ಮುಂದೂಡಬೇಕೆಂಬ ಮನವಿಯನ್ನು ಸುಪ್ರೀಂ ಕೋರ್ಟ್ ಆಗಸ್ಟ್ 17 ರಂದು ವಜಾಗೊಳಿಸಿತ್ತು. ಆರು ರಾಜ್ಯಗಳಾದ - ಬಂಗಾಳ, ಜಾರ್ಖಂಡ್, ರಾಜಸ್ಥಾನ,  ಛತ್ತೀಸ್ ಘರ್,  ಪಂಜಾಬ್ ಮತ್ತು ಮಹಾರಾಷ್ಟ್ರದ ನಾಯಕರು ಸುಪ್ರೀಂ ಕೋರ್ಟ್ ತೀರ್ಪು ಮರುಪರಿಶೀಲನೆ ಮಾಡಬೇಕೆಂದು ಅರ್ಜಿ ಸಲ್ಲಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com