ನವ ದೆಹಲಿ: ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ, ಜನತೆ ಆತಂಕಪಡಬೇಕಾದ ಅಗತ್ಯವಿಲ್ಲ- ಕೇಜ್ರಿವಾಲ್ 

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೊರೋನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಜನರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೊರೋನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಜನರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಆಮ್ ಆದ್ಮಿ ಸರ್ಕಾರ ಕೋವಿಡ್-19 ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಾಗಿ ಮಾಡುತ್ತಿರುವುದರಿಂದ ಹೆಚ್ಚಿನ ಕೊರೋನಾ ವೈರಸ್ ಪ್ರಕರಣಗಳು  ಕಂಡುಬಂದಿವೆ ಎಂದು ಕೇಜ್ರಿವಾಲ್ ಆನ್ ಲೈನ್ ಮಾಧ್ಯಮದಲ್ಲಿ ವಿವರಿಸಿದ್ದಾರೆ.

ಜನರು ನಿರ್ಲಕ್ಷ್ಯ ತೋರದೆ ಕೋವಿಡ್-19 ವಿರುದ್ಧದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ. ಸರ್ಕಾರ ಕೈಗೊಂಡ ಅನೇಕ ಕ್ರಮಗಳಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್-19 ಸಾವಿನ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ.

ಕೋವಿಡ್-19 ರೋಗಿಗಳಿಗೆ ಆಸ್ಪತ್ರೆಯಲ್ಲಿ  ಹಾಸಿಗೆಗಳ ಕೊರತೆಯಿಲ್ಲ, 14 ಸಾವಿರ ಹಾಸಿಗೆಗಳ ಪೈಕಿಯಲ್ಲಿ 5 ಸಾವಿರ ಹಾಸಿಗೆಗಳನ್ನು ಮಾತ್ರ ಪಡೆಯಲಾಗಿದೆ. ಈ ಪೈಕಿ 1600 ರಿಂದ 1700 ಹಾಸಿಗೆಗಳನ್ನು ಇತರ ರಾಜ್ಯಗಳಿಗೆ ಸೇರಿದ ರೋಗಿಗಳಿಗೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ದೆಹಲಿಯಲ್ಲಿ ಶುಕ್ರವಾರ  69 ದಿನಗಳಲ್ಲಿ ಅತಿ ಹೆಚ್ಚು ಎನ್ನಬಹುದಾದ ದಾಖಲೆಯ 2,914 ಹೊಸ ಪ್ರಕರಣಗಳು ಕಂಡುಬಂದಿದ್ದವು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com