ಕೋವಿಡ್-19: ಹರಡುವಿಕೆ, ಸಾವು ತಡೆಗಟ್ಟಲು ಕಠಿಣ ಕ್ರಮಕ್ಕೆ ಕರ್ನಾಟಕ ಸೇರಿ 3 ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

ಕಳೆದ 24 ಗಂಟೆಗಳಲ್ಲಿ ಕರ್ನಾಟಕ, ಆಂಧ್ರ ಪ್ರದೇಶ ಮತ್ತು ಮಹಾರಾಷ್ಟ್ರಗಳಲ್ಲಿ ಶೇಕಡಾ 46ರಷ್ಟು ಕೋವಿಡ್-19 ಸಕ್ರಿಯ ಕೇಸುಗಳು ಮತ್ತು ಶೇಕಡಾ 52ರಷ್ಟು ಸಾವು ಸಂಭವಿಸಿದೆ. ಕೊರೋನಾ ಪ್ರಸರಣಗೊಳ್ಳುವುದನ್ನು ನಿಯಂತ್ರಿಸಲು ಮತ್ತು ಕೊರೋನಾದಿಂದ ಸಾವು ಸಂಭವಿಸುವುದನ್ನು ತಪ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು, ಜನರು ಎಚ್ಚೆತ್ತುಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಕರ್ನಾಟಕ, ಆಂಧ್ರ ಪ್ರದೇಶ ಮತ್ತು ಮಹಾರಾಷ್ಟ್ರಗಳಲ್ಲಿ ಶೇಕಡಾ 46ರಷ್ಟು ಕೋವಿಡ್-19 ಸಕ್ರಿಯ ಕೇಸುಗಳು ಮತ್ತು ಶೇಕಡಾ 52ರಷ್ಟು ಸಾವು ಸಂಭವಿಸಿದೆ. ಕೊರೋನಾ ಪ್ರಸರಣಗೊಳ್ಳುವುದನ್ನು ನಿಯಂತ್ರಿಸಲು ಮತ್ತು ಕೊರೋನಾದಿಂದ ಸಾವು ಸಂಭವಿಸುವುದನ್ನು ತಪ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು, ಜನರು ಎಚ್ಚೆತ್ತುಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ.

ಅಧಿಕ ತಪಾಸಣೆ, ಪರಿಣಾಮಕಾರಿ ಕ್ಲಿನಿಕಲ್ ನಿರ್ವಹಣೆ, ದಕ್ಷತೆಯಿಂದ ವಿವಿಧ ಹಂತಗಳಲ್ಲಿ ನಿಗಾವಹಿಸಿ ಕೊರೋನಾದಿಂದ ಸಾವು ಸಂಭವಿಸುವುದನ್ನು ತಡೆಗಟ್ಟಬೇಕೆಂದು ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳಿಗೆ ಸಲಹೆ ನೀಡಿದೆ.

ದೇಶದ ಒಟ್ಟಾರೆ ಕೋವಿಡ್-19 ಕೇಸುಗಳನ್ನು ನೋಡಿದರೆ ಕರ್ನಾಟಕ, ಆಂಧ್ರ ಪ್ರದೇಶ ಮತ್ತು ಮಹಾರಾಷ್ಟ್ರಗಳಲ್ಲಿ ಶೇಕಡಾ 46 ಇವೆ. ಮಹಾರಾಷ್ಟ್ರ ಒಂದೇ ರಾಜ್ಯದಲ್ಲಿ ಶೇಕಡಾ 22 ಇದ್ದು, ಈ ಮೂರು ರಾಜ್ಯಗಳಲ್ಲಿ ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಕರ್ನಾಟಕದ ಕೊಪ್ಪಳ, ಮೈಸೂರು, ದಾವಣಗೆರೆ, ಬಳ್ಳಾರಿ ಜಿಲ್ಲೆಗಳನ್ನು ಕೇಂದ್ರ ಆರೋಗ್ಯ ಸಚಿವಾಲಯ ವಿಶೇಷವಾಗಿ ಉಲ್ಲೇಖ ಮಾಡಿದ್ದು ಆರ್ ಟಿ-ಪಿಸಿಆರ್ ತಪಾಸಣಾ ವ್ಯವಸ್ಥೆಗಳನ್ನು ಬಳಸಿಕೊಳ್ಳುವಂತೆ, ಮನೆ ಮನೆಗೆ ಹೋಗಿ ತಪಾಸಣೆ ಮಾಡುವಂತೆ, ಆರೋಗ್ಯಸೇವೆ ಕಾರ್ಯಕರ್ತರನ್ನು ಸೋಂಕಿನಿಂದ ರಕ್ಷಿಸುವಲ್ಲಿ ಸರ್ಕಾರಗಳು ವಿಶೇಷ ನಿಗಾವಹಿಸುವಂತೆ ಹೇಳಲಾಗಿದೆ.

ದೇಶದಲ್ಲಿ ಇದುವರೆಗೆ ಕೊರೋನಾದಿಂದ ಮೃತಪಟ್ಟವರ ಪೈಕಿ ಕರ್ನಾಟಕ, ತಮಿಳು ನಾಡು, ಮಹಾರಾಷ್ಟ್ರ, ಆಂಧ್ರ ಪ್ರದೇಶ ಮತ್ತು ದೆಹಲಿಗಳಲ್ಲಿ ಶೇಕಡಾ 70ರಷ್ಟಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com