ದೇಶಾದ್ಯಂತ 24 ಗಂಟೆಗಳಲ್ಲಿ 7,20,362 ಕೋವಿಡ್ ಪರೀಕ್ಷೆ, ಒಟ್ಟಾರೆ 4,95,51,507 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 7,20,362 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 7,20,362 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 7,20,362 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಸೆ.6ರವರೆಗೂ 4,95,51,507 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಇನ್ನು ಒಂದೇ ದಿನ 90,802 ಕೇಸ್ ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 42,04,614ಕ್ಕೆ ಏರಿಕೆಯಾಗಿದೆ. ಈ ಮೂಲಕ 42.04ಲಕ್ಷ ಸೋಂಕಿತರೊಂದಿಗೆ 2ನೇ ಸ್ಥಾನದಲ್ಲಿದ್ದ ಬ್ರೆಜಿಲ್'ನ್ನು 3ನೇ ಸ್ಥಾನಕ್ಕೆ ತಳ್ಳಿದೆ. ಇನ್ನು 64.34 ಕೇಸುಗಳೊಂದಿಗೆ ಅಮೆರಿಕಾ ಈಗಲೂ ಮೊದಲ ಸ್ಥಾನದಲ್ಲಿ ಮುಂದುವರೆದಿದೆ. 

ಈ ನಡುವೆ ಸೋಮವಾರ ಒಂದೇ ದಿನ 1,016 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಈ ವರೆಗೆ ಕೊರೋನಾಗೆ ಬಲಿಯಾದವರ ಸಂಖ್ಯೆ 71,642ಕ್ಕೇರಿದೆ. ಇನ್ನು ಸಾವಿನ ಪಟ್ಟಿಯಲ್ಲಿ ಭಾರತ 3ನೇ ಸ್ಥಾನದಲ್ಲೇ ಮುಂದುವರೆದಿದೆ.
 
42,04,614 ಮಂದಿ ಸೋಂಕಿತರ ಪೈಕಿ 32,50,429 ಜನರು ಸೋಂಕಿನಿಂದ ಗುಣಮುಖರಾಗಿ ಆಶ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನೂ 8,82,542 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com