ಪ್ರಧಾನಿ ಮೋದಿ ಸರ್ಕಾರಿ ಕಂಪನಿಗಳ ಮಾರಾಟದ ಅಭಿಯಾನ ನಡೆಸುತ್ತಿದ್ದಾರೆ; ರಾಹುಲ್‌ ಗಾಂಧಿ

ಜೀವ ವಿಮಾ ಕಾರ್ಪೊರೇಷನ್‌ (ಎಲ್‌ಐಸಿ) ಶೇ.25ರಷ್ಟು ಷೇರನ್ನು ಮಾರಾಟ ಮಾಡುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. 
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಜೀವ ವಿಮಾ ಕಾರ್ಪೊರೇಷನ್‌ (ಎಲ್‌ಐಸಿ) ಶೇ.25ರಷ್ಟು ಷೇರನ್ನು ಮಾರಾಟ ಮಾಡುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
 
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಸರ್ಕಾರಿ ಕಂಪನಿಗಳನ್ನು ಮಾರಾಟ ಮಾಡುವ ಅಭಿಯಾನ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

"ಮೋದಿ ಜಿ ಅವರು ಸರ್ಕಾರಿ ಕಂಪನಿಗಳನ್ನು ಮಾರಾಟ ಮಾಡುವ ಅಭಿಯಾನ ನಡೆಸುತ್ತಿದ್ದಾರೆ. ಸ್ವಯಂ ಅಪರಾಧದಿಂದ ಉಂಟಾಗಿರುವ ಆರ್ಥಿಕ ಕುಸಿತವನ್ನು ಮುಚ್ಚಿಹಾಕಲು ಸರ್ಕಾರದ ಆಸ್ತಿಯನ್ನು ಒಂದರ ನಂತರ ಒಂದರಂತೆ ಮಾರಾಟ ಮಾಡಲಾಗುತ್ತಿದೆ. ಜನರ ಭವಿಷ್ಯ ಮತ್ತು ನಂಬಿಕೆಯನ್ನು ಅಪಾಯಕ್ಕೊಡ್ಡಿ ಎಲ್‌ಐಸಿಯನ್ನು ಮಾರಾಟ ಮಾಡುವುದು ಮೋದಿ ಸರ್ಕಾರದ ಇನ್ನೊಂದು ನಾಚಿಕೆಗೇಡಿನ ಪ್ರಯತ್ನ" ಎಂದು ಕಿಡಿಕಾರಿದ್ದಾರೆ.

ಜೊತೆಗೆ ರಾಹುಲ್‌, ಎಲ್‌ಐಸಿಯ ಶೇ.25ರಷ್ಟು ಷೇರುಗಳನ್ನು ಮಾರಾಟ ಮಾಡುವ ಸರ್ಕಾರದ ಯೋಜನೆ ಕುರಿತ ವರದಿಗಳನ್ನು ಕೂಡ ಟ್ವಿಟರ್‌ನಲ್ಲಿ ಲಗತ್ತಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com