ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ, ಎಲ್ಒಸಿ ಬಳಿ ಅಪ್ರಚೋದಿತ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ಪೂಂಜ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ ಒಸಿ)ಯ ಉದ್ದಕ್ಕೂ ಅಪ್ರಚೋದಿತ ಗುಂಡು ಹಾರಿಸುವ ಮೂಲಕ ಪಾಕಿಸ್ತಾನ ಸೇನಾಪಡೆ ಬುಧವಾರ ಮತ್ತೊಮ್ಮೆ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ಸೇನೆ
ಭಾರತೀಯ ಸೇನೆ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಜ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ ಒಸಿ)ಯ ಉದ್ದಕ್ಕೂ ಅಪ್ರಚೋದಿತ ಗುಂಡು ಹಾರಿಸುವ ಮೂಲಕ ಪಾಕಿಸ್ತಾನ ಸೇನಾಪಡೆ ಬುಧವಾರ ಮತ್ತೊಮ್ಮೆ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೂಂಚ್ ಜಿಲ್ಲೆಯ ದೆಗ್ವಾರ್ ಮತ್ತು ಮಲ್ಟಿ ಸೆಕ್ಟರ್‌ನಲ್ಲಿ ಇಂದು ಸಂಜೆ ಪಾಕಿಸ್ತಾನ ಸಣ್ಣ ಶಸ್ತ್ರಾಸ್ತ್ರಗಳೊಂದಿಗೆ ಗುಂಡು ಹಾರಿಸುವುದರ ಮೂಲಕ ಮತ್ತು ಮೊರ್ಟಾರ್‌ಗಳೊಂದಿಗೆ ಶೆಲ್‍ ದಾಳಿ ನಡೆಸುವ ಮೂಲಕ ಗಡಿ ನಿಯಂತ್ರಣಾ ರೇಖೆಯುದ್ದಕ್ಕೂ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆಗೆ ಚಾಲನೆ ನೀಡಿವೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

"ಪಾಕ್‍ ಪಡೆಗಳ ಗುಂಡಿನ ದಾಳಿಗೆ ಭಾರತೀಯ ಸೇನೆ ಸೂಕ್ತವಾಗಿ ಪ್ರತ್ಯುತ್ತರ ನೀಡುತ್ತಿದೆ.’ ಎಂದು ವಕ್ತಾರರು ತಿಳಿಸಿದ್ದಾರೆ.

ಭಾರತದ ಕಡೆಯಿಂದ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ವಕ್ತಾರರು ಹೇಳಿದ್ದಾರೆ, ಎರಡೂ ಕಡೆಯವರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com