ಉತ್ತರ ಕಾಶ್ಮೀರದಲ್ಲಿ ಪ್ರಬಲ ಐಇಡಿ ನಿಷ್ಕ್ರಿಯ: ತಪ್ಪಿದ ದೊಡ್ಡ ದುರಂತ

ಉತ್ತರ ಕಾಶ್ಮೀರದ ಈ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹೂತಿಟ್ಟಿದ್ದ ಪ್ರಬಲ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಪತ್ತೆ ಹಚ್ಚಿ ನಿಷ್ಕ್ರಿಯಗೊಳಿಸಿ ಮತ್ತೊಂದು ದೊಡ್ಡ ದುರಂತವನ್ನು ತಪ್ಪಿಸಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬಾರಾಮುಲ್ಲಾ: ಉತ್ತರ ಕಾಶ್ಮೀರದ ಈ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹೂತಿಟ್ಟಿದ್ದ ಪ್ರಬಲ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಪತ್ತೆ ಹಚ್ಚಿ ನಿಷ್ಕ್ರಿಯಗೊಳಿಸಿ ಮತ್ತೊಂದು ದೊಡ್ಡ ದುರಂತವನ್ನು ತಪ್ಪಿಸಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಎಂದಿನಂತೆ ತಪಾಸಣೆಯ ಸಮಯದಲ್ಲಿ ಸೇನೆ ಮತ್ತು ಪೊಲೀಸರ ಜಂಟಿ ತಂಡ ಇಂದು ಬೆಳಿಗ್ಗೆ ಬಾರಾಮುಲ್ಲಾದ ಚಾಟ್‌ಲೂರಾ ವಾಟರ್‌ಗ್ಯಾಮ್‌ನಲ್ಲಿ ಪ್ರಯಾಣಿಕರ ಶೆಡ್ ಬಳಿ ಅನುಮಾನಾಸ್ಪದ ವಸ್ತುವನ್ನು ಗಮನಿಸಿದೆ ಎಂದು ಅವರು ಹೇಳಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಈ ಪ್ರದೇಶವನ್ನು ತಕ್ಷಣವೇ ಮುಚ್ಚಿ, ರಸ್ತೆಯ ಸಂಚಾರವನ್ನು ಸ್ಥಗಿತಗೊಳಿಸಲಾಯಿತು. ನಂತರ ಸ್ಥಳಕ್ಕೆ ಆಗಮಿಸಿದ ಬಾಂಬ್ ನಿಷ್ಕ್ರಿಯ ದಳ ಯಾವುದೇ ಹಾನಿಯಾಗದಂತೆ ಐಇಡಿಯನ್ನು ನಿಷ್ಕ್ರಿಯಗೊಳಿಸಿದೆ. ಹೆಚ್ಚಿನ ಸಂಖ್ಯೆಯ ಜನರು ಇದ್ದದ್ದರಿಂದ ಸ್ಫೋಟಕವನ್ನ ಪತ್ತೆಹಚ್ಚಲಾಗದಿದ್ದರೆ ಭಾರೀ ಪ್ರಮಾಣದ ಹಾನಿಯನ್ನುಂಟುಗುತ್ತಿತ್ತು ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com