2ಜಿ ಸ್ಪೆಕ್ಟ್ರಂ ಹಗರಣ: ಮಾಜಿ ಸಚಿವ ಎ ರಾಜಾ, ಕನ್ನಿಮೊಳಿಗೆ ನೋಟಿಸ್ ಜಾರಿ

2ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಂಬಂಧಿಸಿದ 19 ಆರೋಪಿಗಳನ್ನು ಖುಲಾಸೆಗೊಳಿಸಿದ್ದ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸಲ್ಲಿಸಲಾದ ಮನವಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಪ್ರಮುಖ ಆರೋಪಿ, ಕೇಂದ್ರದ ಮಾಜಿ ಸಚಿವ ಎ ರಾಜಾ ಸೇರಿದಂತೆ ಹಲವರಿಗೆ ನೋಟಿಸ್ ಜಾರಿ ಮಾಡಿದೆ.
ರಾಜ್ಯಸಭೆ ಎಂಪಿ ಕನ್ನಿಮೊಳಿ ಮತ್ತು ಮಾಜಿ ಟೆಲಿಕಾಂ ಸಚಿವ ಎ. ರಾಜಾ
ರಾಜ್ಯಸಭೆ ಎಂಪಿ ಕನ್ನಿಮೊಳಿ ಮತ್ತು ಮಾಜಿ ಟೆಲಿಕಾಂ ಸಚಿವ ಎ. ರಾಜಾ

ನವದೆಹಲಿ: 2ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಂಬಂಧಿಸಿದ 19 ಆರೋಪಿಗಳನ್ನು ಖುಲಾಸೆಗೊಳಿಸಿದ್ದ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸಲ್ಲಿಸಲಾದ ಮನವಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಪ್ರಮುಖ ಆರೋಪಿ, ಕೇಂದ್ರದ ಮಾಜಿ ಸಚಿವ ಎ ರಾಜಾ ಸೇರಿದಂತೆ ಹಲವರಿಗೆ ನೋಟಿಸ್ ಜಾರಿ ಮಾಡಿದೆ.

ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಈ ಮೇಲ್ಮನವಿಯಲ್ಲಿ, ಸುಮಾರು 30 ಕೋಟಿ ರೂ. ಗಳ ಈ ಹಗರಣದ ಕುರಿತು ಮತ್ತೊಮ್ಮೆ ವಿಚಾರಣೆ ನಡೆಸುವಂತೆ ಕೋರಲಾಗಿದೆ.

ವಿಚಾರಣೆಯನ್ನು ಅವಧಿಗೂ ಮುನ್ನವೇ ಕೈಗೆತ್ತಿಕೊಳ್ಳುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಜಸ್ಟೀಸ್ ಬ್ರಿಜೇಶ್ ಸೇಠಿ ಅವರು ಎ ರಾಜಾ ಹಾಗೂ ಇನ್ನಿತರರನ್ನು ಅರ್ಜಿಗೆ ಉತ್ತರಿಸುವಂತೆ ಸೂಚಿಸಿ ನೋಟಿಸ್ ಜಾರಿಮಾಡಿದ್ದಾರೆ. ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 21ಕ್ಕೆ ಮುಂದೂಡಲಾಗಿದೆ.

''ಜನವರಿ 15ಕ್ಕೆ ನಡೆಯಬೇಕಿದ್ದ ವಿಚಾರಣೆಯು ಕೊವಿಡ್ 19ರ ಕಾರಣದಿಂದ ಮುಂದೂಡಲ್ಪಟ್ಟಿದೆ. ಹಾಲಿ ಏಕ ಸದಸ್ಯ ಪೀಠವು ನವೆಂಬರ್ 30ಕ್ಕೆ ಕೊನೆಗೊಳ್ಳಲಿದ್ದು, ಹೊಸ ನ್ಯಾಯಪೀಠದ ಮೂಲಕ ಮತ್ತೊಮ್ಮೆ ಎಲ್ಲಾ ಕಾನೂನು ಪ್ರಕ್ರಿಯೆ ನಡೆಸಬೇಕಾದರೆ ಸಾರ್ವಜನಿಕರ ಹಣವನ್ನು ಪೋಲು ಮಾಡಿದಂತಾಗುತ್ತದೆ'' ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಸಂಜಯ್ ಜೈನ್ ಅವರು ಹೇಳಿದ್ದಾರೆ.

2014ರಲ್ಲಿ ಯುಪಿಎ ಸರ್ಕಾರ ಅಧಿಕಾರವಧಿಯಲ್ಲಿ ನಡೆದಿದ್ದ 30 ಸಾವಿರ ಕೋಟಿ ರೂ. ಹಗರಣದ ಪ್ರಮುಖ ಆರೋಪಿಗಳಾಗಿದ್ದ ಮಾಜಿ ಸಚಿವ ಎ.ರಾಜಾ, ಕರಣಾನಿಧಿ ಅವರ ಪುತ್ರಿ, ಸಂಸದೆ ಕನ್ನಿಮೊಳಿ ಸೇರಿದಂತೆ ಒಟ್ಟು 19 ಆರೋಪಿಗಳನ್ನು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com