ದೇಶಾದ್ಯಂತ 24 ಗಂಟೆಗಳಲ್ಲಿ 10,91,251 ಕೋವಿಡ್ ಪರೀಕ್ಷೆ, ಒಟ್ಟಾರೆ 5.51 ಕೋಟಿ ಸ್ಯಾಂಪಲ್ ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ  10,91,251 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ  10,91,251 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 10,91,251 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಸೆ.11ರವರೆಗೂ 5,51,89,226 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ಹಿಂದೆ ಸೆಪ್ಟೆಂಬರ್ 10 ರಂದು, ಐಸಿಎಂಆರ್ 11,63,542 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ಮಾಡಿತ್ತು. ಇದರಂತೆ ಒಟ್ಟು ಪರೀಕ್ಷೆಗಳ ಸಂಖ್ಯೆ5,40,97,975 ಕ್ಕೆ ಏರಿಕೆಯಾಗಿತ್ತು. 

ಈ ನಡುವೆ ಭಾರತದಲ್ಲಿ ಒಂದೇ ದಿನ 97,570 ಹೊಸ ಕೇಸ್'ಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 46,59,985ಕ್ಕೆ ಏರಿಕೆಯಾಗಿದೆ. 

ಇನ್ನು ಕಳೆದ 24 ಗಂಟೆಗಳಲ್ಲಿ ಹೆಮ್ಮಾರಿ ವೈರಸ್ 1,201 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 77,472ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

46,59,985 ಮಂದಿ ಸೋಂಕಿತರ ಪೈಕಿ ದೇಶದಲ್ಲಿ ಒಟ್ಟಾರೆ 36,24,197 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನೂ 9,58,316 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ವರದಿಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com