ಬಿಹಾರ ಚುನಾವಣೆ: ಸೀಟು ಹಂಚಿಕೆ ಬಗ್ಗೆ ನಿತೀಶ್ ಜೊತೆ ನಡ್ಡಾ ಮಹತ್ವದ ಮಾತುಕತೆ

ಬಿಹಾರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಜೊತೆ ಸೆ.12 ರಂದು ಮಹತ್ವದ ಮಾತುಕತೆ ನಡೆಸಿದ್ದಾರೆ. 
ಬಿಹಾರ ಚುನಾವಣೆ: ಸೀಟು ಹಂಚಿಕೆ ಬಗ್ಗೆ ನಿತೀಶ್ ಜೊತೆ ನಡ್ಡಾ ಮಹತ್ವದ ಮಾತುಕತೆ
ಬಿಹಾರ ಚುನಾವಣೆ: ಸೀಟು ಹಂಚಿಕೆ ಬಗ್ಗೆ ನಿತೀಶ್ ಜೊತೆ ನಡ್ಡಾ ಮಹತ್ವದ ಮಾತುಕತೆ

ಪಾಟ್ನ: ಬಿಹಾರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಜೊತೆ ಸೆ.12 ರಂದು ಮಹತ್ವದ ಮಾತುಕತೆ ನಡೆಸಿದ್ದಾರೆ. 

ಬಿಹಾರದಲ್ಲಿ ಎನ್ ಡಿಎ ಮೈತ್ರಿಕೂಟದ ನಡುವೆ ಸ್ಥಾನ ಹಂಚಿಕೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ. ಬಿಹಾರ ಬಿಜೆಪಿ ನಾಯಕ, ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಬಿಹಾರ ಉಸ್ತುವಾರಿ ಭುಪೇಂದ್ರ ಯಾದವ್, ಬಿಜೆಪಿ ರಾಜ್ಯಾಧ್ಯಕ್ಷ ಸಂಜಯ್ ಜೈಸ್ವಾಲ್ ಅವರು ನಿತೀಶ್ ಕುಮಾರ್ ಅವರ ಗೃಹ ಕಚೇರಿಯಲ್ಲಿ ಸಭೆ ಸೇರಿ ಮಾತುಕತೆ ನಡೆಸಿದ್ದಾರೆ. 

ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ರಾಮ್ ವಿಲಾಸ್ ಪಾಸ್ವನ್ ಅವರ ಲೋಕ್ ಜನಶಕ್ತಿ ಪಕ್ಷದ ಯುವ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರ ಕಾರಣದಿಂದ ಎನ್ ಡಿಎಯಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯಗಳನ್ನು ಬಗೆಹರಿಸುವುದಾಗಿ ಬಿಜೆಪಿ ನಾಯಕತ್ವ ನಿತೀಶ್ ಕುಮಾರ್ ಗೆ ಭರವಸೆ ನೀಡಿರುವುದಾಗಿ ತಿಳಿದುಬಂದಿದೆ. 

ನ.29 ಕ್ಕೆ ಈಗಿನ ವಿಧಾನಸಭೆಯ ಅವಧಿ ಮುಕ್ತಾಯಗೊಳ್ಳಲಿದ್ದು, ಶೀಘ್ರವೇ ಚುನಾವಣೆ ದಿನಾಂಕ ಪ್ರಕಟಗೊಳ್ಳಲಿದೆ. 

ಎನ್ ಡಿಎ ಮೈತ್ರಿಕೂಟದಲ್ಲಿರುವ ಜೆಡಿಯು ಹಾಗೂ ಎಲ್ ಜೆಪಿ ನಡುವೆ ತಲೆದೋರಿರುವ ಭಿನ್ನಾಭಿಪ್ರಾಯಗಳ ಬಗ್ಗೆ ಕಳೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಬಿಜೆಪಿಯ ಬಿಹಾರ ಚುನಾವಣಾ ಉಸ್ತುವಾರಿ ದೇವೇಂದ್ರ ಫಡ್ನವೀಸ್ ಎನ್ ಡಿಎನ್ನು ಯಾರೂ ತೊರೆಯುವುದಿಲ್ಲ, ಮತ್ತಷ್ಟು ಜನರು ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com