ಕೋವಿಡ್-19: 24 ಗಂಟೆಗಳಲ್ಲಿ ಗರಿಷ್ಠ 81,533 ಸೋಂಕಿತರು ಗುಣಮುಖ, 5 ರಾಜ್ಯಗಳ ಪಾಲೇ ಶೇ.60

ಭಾರತದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವಂತೆಯೇ ಗುಣಮುಖರಾಗುತ್ತಿರುವವರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಭಾರತದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವಂತೆಯೇ ಗುಣಮುಖರಾಗುತ್ತಿರುವವರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದೆ.

ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 81,533 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 36 ಲಕ್ಷ ಗಡಿ ದಾಟಿದೆ. ಈ ವರೆಗೂ ದೇಶದಲ್ಲಿ 36,24,196 ಸೋಂಕಿತರು ಗುಣಮುಖರಾಗಿದ್ದಾರೆ. ಆ ಮೂಲಕ  ದೇಶದಲ್ಲಿನ ಕೊರೋನಾ ಗುಣಮುಖರ ಪ್ರಮಾಣ 77.77ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ ಕಂಡುಬಂದ 81,533 ಗುಣಮುಖರ ಪೈಕಿ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ ಮತ್ತು ಉತ್ತರ ಪ್ರದೇಶ ಈ ಐದು ರಾಜ್ಯಗಳಲ್ಲಿಯೇ ಶೇ.60ರಷ್ಟು ಸೋಂಕಿತರು ಗುಣಮುಖರಾಗಿದ್ದಾರೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ 14 ಸಾವಿರ ಸೋಂಕಿತರು ಗುಣಮುಖರಾಗಿದ್ದು, ಕರ್ನಾಟಕದಲ್ಲಿ 12 ಸಾವಿರ ಮಂದಿ ಗುಣಮುಖರಾಗಿದ್ದಾರೆ. 

ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,201 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಕೋವಿಡ್-19 ಸಾವಿನ ಸಂಖ್ಯೆ 77,472ಕ್ಕೆ ಏರಿಕೆಯಾಗಿದೆ. ಕೋವಿಡ್ ಸಾವಿನ ಪ್ರಮಾಣ 1.66ಕ್ಕೆ ಕುಸಿದಿದ್ದು, ಗುಣಮುಖರ ಪ್ರಮಾಣ ಶೇ.77.77ಕ್ಕೆ ಏರಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com