ದೇಶಾದ್ಯಂತ 24 ಗಂಟೆಗಳಲ್ಲಿ 10,71,702 ಕೋವಿಡ್ ಪರೀಕ್ಷೆ, ಒಟ್ಟಾರೆ 5.62 ಕೋಟಿ ಸ್ಯಾಂಪಲ್ ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ  10,71,702 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ  10,71,702 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 10,71,702 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಸೆ.12 ರವರೆಗೂ 5,62,60,928 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ಹಿಂದೆ ಸೆಪ್ಟೆಂಬರ್ 10 ರಂದು, ಐಸಿಎಂಆರ್ 11,63,542 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ಮಾಡಿತ್ತು. ಇದರಂತೆ ಒಟ್ಟು ಪರೀಕ್ಷೆಗಳ ಸಂಖ್ಯೆ5,40,97,975 ಕ್ಕೆ ಏರಿಕೆಯಾಗಿತ್ತು. 

ಈ ನಡುವೆ ಭಾರತದಲ್ಲಿ ನಿನ್ನೆ ಒಂದೇ ದಿನ 97,570 ಹೊಸ ಕೇಸ್'ಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 46,59,985ಕ್ಕೆ ಏರಿಕೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com