ಕೇಂದ್ರದ ಮಾಜಿ ಸಚಿವ ರಘುವಂಶ್ ಪ್ರಸಾದ್ ಸಿಂಗ್ ನಿಧನ, ಪ್ರಧಾನಿ ಮೋದಿ ಸಂತಾಪ

ಕೇಂದ್ರ ಸರ್ಕಾರದ ಮಾಜಿ ಸಚಿವ ಹಿರಿಯ ಸಮಾಜವಾದಿ ಡಾ ರಘುವಂಶ ಪ್ರಸಾದ್ ಸಿಂಗ್ ಭಾನುವಾರ ಬೆಳಗ್ಗೆ ನಿಧನ ಹೊಂದಿದ್ದಾರೆ. ಎದೆನೋವಿನ ಕಾರಣದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ 74 ವರ್ಷದ ರಘುವಂಶ ಪ್ರಸಾದ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.
ಡಾ ರಘುವಂಶ್ ಪ್ರಸಾದ್ ಸಿಂಗ್
ಡಾ ರಘುವಂಶ್ ಪ್ರಸಾದ್ ಸಿಂಗ್

ಪಾಟ್ನಾ:ಕೇಂದ್ರ ಸರ್ಕಾರದ ಮಾಜಿ ಸಚಿವ ಹಿರಿಯ ಸಮಾಜವಾದಿ ಡಾ ರಘುವಂಶ್ ಪ್ರಸಾದ್ ಸಿಂಗ್ ಭಾನುವಾರ ಬೆಳಗ್ಗೆ ನಿಧನ ಹೊಂದಿದ್ದಾರೆ. ಎದೆನೋವಿನ ಕಾರಣದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ 74 ವರ್ಷದ ರಘುವಂಶ್ ಪ್ರಸಾದ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ಜೂನ್ 17ರಂದು ಅವರಿಗೆ ಕೋವಿಡ್-19 ಕಂಡುಬಂದು ಆಸ್ಪತ್ರೆಗೆ ದಾಖಲಾಗಿದ್ದರು.

ಬಿಹಾರ ರಾಜ್ಯದ ವೈಶಾಲಿ ಜಿಲ್ಲೆಯವರಾದ ಡಾ ರಘುವಂಶ್ ಪ್ರಸಾದ್ ಸಿಂಗ್, ಯುಪಿಎ ಸರ್ಕಾರದ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು.ಆರ್ ಜೆಡಿಯಲ್ಲಿ ಭಿನ್ನಾಭಿಪ್ರಾಯ ಬಂದು ಇತ್ತೀಚೆಗೆ ಅವರು ಪಕ್ಷ ತೊರೆದಿದ್ದರು.ನಾನು 32 ವರ್ಷ ಲಾಲೂ ಪ್ರಸಾದ್ ಯಾದವ್ ಜೊತೆಗಿದ್ದು, ಆದರೆ ಈಗ ನನ್ನನ್ನು ಕ್ಷಮಿಸಿ, ನಾನು ಬಿಟ್ಟುಹೋಗುತ್ತೇನೆ ಎಂದು ಜೈಲಿನಲ್ಲಿರುವ ಲಾಲೂ ಪ್ರಸಾದ್ ಯಾದವ್ ಗೆ ಪತ್ರ ಬರೆದಿದ್ದರು.

ಐದು ಬಾರಿ ವೈಶಾಲಿ ಕ್ಷೇತ್ರದ ಸಂಸದರಾಗಿದ್ದ ರಘುವಂಶ್ ಪ್ರಸಾದ್ 2014ರ ಚುನಾವಣೆಯಲ್ಲಿ ಮತ್ತು ಕಳೆದ ವರ್ಷದ ಚುನಾವಣೆಯಲ್ಲಿ ಕೂಡ ಸೋತಿದ್ದರು.

ಇತ್ತೀಚೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಗೆ ಪತ್ರ ಬರೆದು ವೈಶಾಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನಡೆಸುವಂತೆ ಮತ್ತು ನರೇಗಾ ಕಾನೂನಿಗೆ ತಿದ್ದುಪಡಿ ವಿಧೇಯಕವನ್ನು ತರುವಂತೆ ಒತ್ತಾಯಿಸಿದ್ದರು. ನೈತಿಕ ರಾಜಕೀಯ ಇತ್ತೀಚಿನ ದಿನಗಳಲ್ಲಿ ಅಧಃಪತನವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು.

ಕೇಂದ್ರದ ಮಾಜಿ ಸಚಿವ ರಘುವಂಶ್ ಪ್ರಸಾದ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅವರ ನಿಧನವು ಬಿಹಾರ ರಾಜ್ಯದ ರಾಜಕೀಯ ಮತ್ತು ದೇಶದ ರಾಜಕೀಯ ಪರಂಪರೆಗೆ ತುಂಬಲಾರದ ನಷ್ಟ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com