ವಿರೋಧದ ನಡುವೆಯೂ ಕೋವಿಡ್ ಮುಂಜಾಗ್ರತೆಗಳೊಂದಿಗೆ ಇಂದು ದೇಶದಾದ್ಯಂತ ನೀಟ್ ಪರೀಕ್ಷೆ ಆರಂಭ

ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ  ಪ್ರವೇಶ ಪರೀಕ್ಷೆಯಾದ ನೀಟ್ ಭಾನುವಾರ ಆರಂಭವಾಗಲಿದ್ದು, ಸುಮಾರು 15.97ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ  ಪ್ರವೇಶ ಪರೀಕ್ಷೆಯಾದ ನೀಟ್ ಭಾನುವಾರ ಆರಂಭವಾಗಲಿದ್ದು, ಸುಮಾರು 15.97ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ಅತ್ಯಂದ ಬಿಗಿ ಭದ್ರತೆಯ ಜೊತೆಜೊತೆಗೇ ಹಲವು ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. 

ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು 2,546ರಿಂದ 3,843ಕ್ಕೆ ಏರಿಕೆ ಮಾಡಲಾಗಿದೆ. ಒಂದು ಕೋಣೆಯಲ್ಲಿ 24ರ ಬದಲಾಗಿ 12 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. 

ಕೊಠಿ ಹೊರಗೆ ದೈಹಿಕ ಅಂತರ ಪಾಲಿಸಲು ಆಗಮನ ಹಾಗೂ ನಿರ್ಗಮನಕ್ಕೆ ಪ್ರತ್ಯೇಕ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರ ಪ್ರವೇಶಕ್ಕೆ ಮಾಸ್ಕ್ ಕಡ್ಡಾಯ ಸೇರಿದಂತೆ ಹಲವು ಸುರಕ್ಷತಾ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಈ ಮೊದಲು ಮೇ.3ಕ್ಕೆ ನಿಗದಿಯಾಗಿದ್ದ ಪರೀಕ್ಷೆಯನ್ನು ಎರಡು ಬಾರಿ ಕೊರೋನಾ ಕಾರಣದಿಂದಾಗಿ ಮುಂದೂಡಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com