ಮತ್ತೆ ಆಸ್ಪತ್ರೆಗೆ ದಾಖಲಾದ ಗೃಹ ಸಚಿವ ಅಮಿತ್ ಶಾ:ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ಎರಡು ವಾರಗಳು ಕಳೆದ ನಂತರ ಮತ್ತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಸ್ಪತ್ರೆ ಸೇರಿದ್ದಾರೆ. ನಿನ್ನೆ ಮತ್ತೆ ಅವರಿಗೆ ಉಸಿರಾಟದ ಸಮಸ್ಯೆ ಕಂಡುಬಂದಿದ್ದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಮಿತ್ ಶಾ(ಸಂಗ್ರಹ ಚಿತ್ರ)
ಅಮಿತ್ ಶಾ(ಸಂಗ್ರಹ ಚಿತ್ರ)

ನವದೆಹಲಿ: ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ಎರಡು ವಾರಗಳು ಕಳೆದ ನಂತರ ಮತ್ತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಸ್ಪತ್ರೆ ಸೇರಿದ್ದಾರೆ. ನಿನ್ನೆ ಮತ್ತೆ ಅವರಿಗೆ ಉಸಿರಾಟದ ಸಮಸ್ಯೆ ಕಂಡುಬಂದಿದ್ದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆದರೆ ಆಸ್ಪತ್ರೆ ಕಡೆಯಿಂದ ಈ ಬಗ್ಗೆ ಖಚಿತ ಮಾಹಿತಿ ಬಂದಿಲ್ಲ, ಹಲವು ಮೂಲಗಳಿಂದ ಸುದ್ದಿಸಂಸ್ಥೆಗೆ ವರದಿ ಸಿಕ್ಕಿದೆ.

ಕಳೆದ ತಡರಾತ್ರಿ 11 ಗಂಟೆ ಸುಮಾರಿಗೆ ಅಮಿತ್ ಶಾ ದಾಖಲಾಗಿದ್ದು ಅವರನ್ನು ಸಿಎನ್ ಟವರ್ ನಲ್ಲಿ ಅಂದರೆ ವಿವಿಐಪಿಗಳಿಗೆ ಮೀಸಲಾಗಿರುವ ವ್ಯವಸ್ಥಾ ಕೊಠಡಿಯಲ್ಲಿ ಇರಿಸಲಾಗಿದೆ. ಏಮ್ಸ್ ನಿರ್ದೇಶಕ ಡಾ ರಂದೀಪ್ ಗುಲೆರಿಯಾ ಅವರು ಅಮಿತ್ ಶಾ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಅವರ ಪರಿಸ್ಥಿತಿ ಸದ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಆಗಸ್ಟ್ 2ರಂದು ಕೋವಿಡ್-19 ಸೋಂಕು ಪತ್ತೆಯಾದ ನಂತರ ಗುರುಗ್ರಾಮ್ ನ ಮೇದಾಂತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮತ್ತೆ ಅವರಿಗೆ ಸಮಸ್ಯೆ ತಲೆದೋರಿತ್ತು. ನಂತರ ಆಗಸ್ಟ್ 18ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾದರು. ಆಗಲೂ ಅವರಿಗೆ ಉಸಿರಾಟದ ಸಮಸ್ಯೆ ತಲೆದೋರಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com